Gruhalakshmi Yojana – Annabhagya Yojana: ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ‘ಗೃಹಲಕ್ಷ್ಮೀ’ ಹಣ – ಸಂಪುಟ ಸಭೆಯಲ್ಲಿ ಹೊಸ ಟ್ವಿಸ್ಟ್!!
Gruhalakshmi Yojana – Annabhagya Yojana: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ತೀರ್ಮಾನ ಒಂದನ್ನು ಕೈಗೊಂಡಿದ್ದು ರಾಜ್ಯದ ಜನತೆಗೆ ಇದರಿಂದ ಪ್ರಯೋಜನ ಆಗಲಿದೆ. ಈಗಾಗಲೇ ಹಲವು ಕಾರಣಗಳಿಂದ ಇದುವರೆಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ (Gruhalakshmi yojana – annabhagya yojana ) ಯೋಜನೆಗಳ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗದ ಕುಟುಂಬಗಳಿಗೆ ಇನ್ನು ಮುಂದೆ ಕುಟುಂಬದ ಹಿರಿಯ ಮಹಿಳಾ ಸದಸ್ಯರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮನೆಯ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ಮತ್ತು ಅನ್ನಭಾಗ್ಯ ಯೋಜನೆ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲು 170 ರೂ. ಹಣ ಸಂದಾಯ ಮಾಡಲಾಗುತ್ತಿದೆ. ಆದರೆ ಈ ಹಣ ವು, ಮನೆಯೊಡತಿ ಘೋಷಣೆ ಮಾಡದ ಕಾರಣ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದಿರುವುದು ಸೇರಿ ನಾನಾ ಕಾರಣಗಳಿಂದ 9 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಲ್ಲ. ಅದಲ್ಲದೆ 7.67 ಲಕ್ಷ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯ ಹಣ ಇನ್ನೂ ಸಂದಾಯವಾಗಿಲ್ಲ.
ಸದ್ಯ ಅಂತಹ ಕುಟುಂಬಗಳಿಗೆ ಯೋಜನೆ ಹಣ ತಲುಪಿಸಲು ಎಲ್ಲಾ ಕುಟುಂಬಗಳ ಪಡಿತರ ಚೀಟಿಯಲ್ಲಿ ಹೆಸರಿರುವ ಹಿರಿಯ ಮಹಿಳಾ ಸದಸ್ಯರ ಖಾತೆಗೆ ಇನ್ನು ಮುಂದೆ ಡಿಬಿಟಿ ಮೂಲಕ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.