KSRTC Special Bus: ಶಬರಿ ಮಲೆಗೆ ತೆರಳುವವರಿಗೆ ಸಿಹಿ ಸುದ್ದಿ – KSRTC ಯಿಂದ ಸಿಗ್ತಿದೆ ವಿಶೇಷ ಸೌಲಭ್ಯ !!
KSRTC Special Bus: ಡಿಸೆಂಬರ್ ಹಾಗೂ ಜನವರಿಯಲ್ಲಿ ಭಕ್ತರು ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಾರೆ. ಜನವರಿಯಲ್ಲಿ ಮಕರ ಸಂಕ್ರಮಣದ ದಿನ ದೇಗುಲದಲ್ಲಿ ವಾರ್ಷಿಕ ಉತ್ಸವ ನಡೆಯಲಿದ್ದು, ಉತ್ಸವದ ದಿನ ಲಕ್ಷಾಂತರ ಭಕ್ತರು ಶಬರಿಮಲೆಗೆ ತೆರಳುತ್ತಾರೆ. ಅಂತೆಯೇ ಇದೀಗ ಬೆಂಗಳೂರಿನಿಂದ ಶಬರಿಮಲೆಗೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ KSRTC ಸಿಹಿ ಸುದ್ದಿ ನೀಡಿದೆ. ಹೌದು, ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ (Shabarimala) ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿನಿಂದ ಬಸ್ ವ್ಯವಸ್ಥೆ ಮಾಡಿದೆ.
ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬೆಂಗಳೂರಿನಿಂದ, ಡಿಸೆಂಬರ್ 1ರಿಂದ ವಿಶೇಷ ಬಸ್ ಸೌಲಭ್ಯ (KSRTC Special Bus) ಪ್ರಯಾಣಿಕರಿಗೆ ಲಭ್ಯವಿರಲಿದ್ದು, ಯಾತ್ರಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಮುಖ್ಯವಾಗಿ ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ.
ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಅಂದು ಸಂಜೆ ಮತ್ತೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ.
ಮತ್ತೊಂದು ರಾಜಹಂಸ ಬಸ್ (ನಾನ್ಎಸಿ) ಕೂಡ ಶಬರಿಮಲೆಗೆ ಸಂಚರಿಸಲಿದೆ. ರಾಜಹಂಸ ಬಸ್ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.
ಶಬರಿಮಲೆ ಪ್ರಯಾಣಕ್ಕಾಗಿ ಬಸ್ಗೆ ಟಿಕೆಟ್ ಬುಕಿಂಗ್ ಮಾಡುವ ವಿಧಾನ:
ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ (www.ksrtc.in) ಮೂಲಕ ಅಥವಾ ರಾಜ್ಯದಾದ್ಯಂತ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್ಆರ್ಟಿಸಿ ಟಿಕೆಟ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಸಂಸ್ಥೆಯು ಪ್ರಯಾಣಿಕರಿಗೆ ಸಲಹೆ ನೀಡಿದೆ.
ಇದನ್ನು ಓದಿ: Indore School Student: ಶಾಲೆಯಲ್ಲಿ ಗೆಳೆಯನಿಗೆ 100 ಬಾರಿ ಕೈವಾರದಿಂದ ಚುಚ್ಚಿದ 4ನೇ ತರಗತಿ ವಿದ್ಯಾರ್ಥಿಗಳು !!