Ration Card Correction: ರೇಷನ್ ಕಾರ್ಡ್ ದಾರರಿಗೆ ಮತ್ತೆ ಗುಡ್ ನ್ಯೂಸ್- ಕಾರ್ಡ್ ತಿದ್ದುಪಡಿಗೆ ಮತ್ತೆ ಈ 2 ದಿನ ಅವಕಾಶ ಕೊಟ್ಟ ಸರ್ಕಾರ!!
Karnataka news good news for ration card holders ration card correction deadline extended
Ration card correction: ಪಡಿತರ ಚೀಟಿದಾರರೇ ಗಮನಿಸಿ, ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ತಿದ್ದುಪಡಿ(Ration card correction) ಮಾಡಲು, ವಿಳಾಸ ಸರಿಪಡಿಸುವ ಜೊತೆಗೆ ಇನ್ನಿತರ ಬದಲಾವಣೆಗೆ ಅಹಾರ ಇಲಾಖೆ( Food Department) ಮತ್ತೊಮ್ಮೆ ಅನುವು ಮಾಡಿಕೊಟ್ಟಿದೆ.
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್‌ಸಿ ತಿದ್ದುಪಡಿ(GST Correction)ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಮತ್ತು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ನವೆಂಬರ್ 29 ಮತ್ತು 30 ರ ಎರಡು ದಿನಗಳವರೆಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಇವುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಆನ್‌ಲೈನ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅದರ ಜೊತೆಗೆ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯವಾಗಿರುವ ಹಿನ್ನೆಲೆ ಸರಿಪಡಿಸಿಕೊಳ್ಳಲು ಕರ್ನಾಟಕ ಸರ್ಕಾರ ಅನುವು ಮಾಡಿಕೊಡಲಾಗಿದೆ. ಇದರ ಜೊತೆಗೆ, ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 3 ರಂದು ಒಂದು ದಿನ ಮಾತ್ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ಅನುವು ಮಾಡಿಕೊಡಲಾಗಿದೆ. ಈ ನಿಟ್ಟಿನಲ್ಲಿ ಸರಿಯಾದ ಹೆಸರು, ಆಧಾರ್ ಕಾರ್ಡ್ ಹಾಗೂ ವಿಳಾಸದ ದಾಖಲೆಯನ್ನು ತರುವಂತೆ, ನಿಗದಿತ ಸಮಯದೊಳಗೆ ಭೇಟಿ ನೀಡಬೇಕು ಎಂದು ತಿಳಿಸಲಾಗಿದೆ.