Eshwar Khandre: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ ಕುರಿತು ಬಿಗ್ ಅಪ್ಡೇಟ್!!!
Karnataka news property tax building matter and tax Eshwar Khandre says big update
Eshwar Khandre :ಪರಿಸರ ಸಚಿವ ಈಶ್ವರ ಖಂಡ್ರೆ(Eshwar Khandre )ಅವರು ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ-ಖಾತೆ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿರುವ ಕುರಿತು ವರದಿಯಾಗಿದೆ.
ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ-ಖಾತೆ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ ವಿಧಿಸುವ ಕುರಿತು ಗುರುವಾರ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರೊಂದಿಗೆ ಸಚಿವರು ಚರ್ಚೆ ನಡೆಸಿದ್ದಾರೆ.
ಇ-ಖಾತೆ ನೀಡುವ ನಿಟ್ಟಿನಲ್ಲಿ ಸಿದ್ಧವಾಗಿರುವ ಸಾಫ್ಟ್ವೇರ್ ಬಗ್ಗೆ ಮಾಹಿತಿ ಪಡೆದಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಇವುಗಳಲ್ಲಿ 20:55 ಲಕ್ಷ ಅಧಿಕೃತ ಆಸ್ತಿಗಳಾಗಿದ್ದು, ತೆರಿಗೆ ಪಾವತಿಸಲಾಗುತ್ತಿದೆ. ಅನಧಿಕೃತವಾಗಿ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸುತ್ತಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.