Udupi: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್ ಪರಪ್ಪನ ಅಗ್ರಹಾರಕ್ಕೆ!!!

Udupi: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆಯನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.

ಉಡುಪಿ ಸಬ್‌ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿದೆ.
ಭದ್ರತೆ ನೀಡುವುದು ಸವಾಲಿನ ಕೆಲಸವಾಗಿದ್ದರಿಂದ ಈತನ ಮೇಲೆ ಹಲ್ಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಈತ ಮೊದಲಿದ್ದ ಉಡುಪಿಯ ಸಬ್‌ಜೈಲಿಗೆ ರವಾನಿಸಲಾಗಿತ್ತು. ಅಲ್ಲಿಂದ ಈಗ ಸದ್ಯ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಡಿ.5 ರ ತನಕ ಆರೋಪಿಗೆ ನ್ಯಾಯಾಂಗ ಬಂಧನವಿದ್ದುಮ ವೀಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.