Home Jobs Karnataka Bank Recruitment 2023: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ,...

Karnataka Bank Recruitment 2023: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ, ಮಾಸಿಕ ರೂ.63 ಸಾವಿರ!!!

Karnataka Bank Recruitment 2023

Hindu neighbor gifts plot of land

Hindu neighbour gifts land to Muslim journalist

Karnataka Bank Recruitment 2023: ಉದ್ಯೋಗಾಂಕ್ಷಿಗಳೇ ಗಮನಿಸಿ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿದ್ದರೆ, ನಿಮಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ಬ್ಯಾಂಕ್ Law Officer ಹುದ್ದೆಗೆ ಅರ್ಜಿಗಳನ್ನು (Karnataka Bank Recruitment 2023)ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

ದೇಶಾದ್ಯಂತ ಖಾಲಿ ಇರುವ Law Officer ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ. ಖಾಲಿಯಿರುವ ಹುದ್ದೆಗಳ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದ್ದು ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹತಾ ಮಾನದಂಡಗಳು:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು.
* ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ (1/11/2023) ಕ್ಕೇ ಕನಿಷ್ಠ ವಯೋಮಿತಿ 30 ವರ್ಷವಾಗಿದ್ದು, ನೇಮಕಾತಿ ನಿಯಮಗಳನುಸರ ವಯೋಮಿತಿ ಸಡಿಲಿಕೆಯಿರಲಿದೆ.

ಕರ್ನಾಟಕ ಬ್ಯಾಂಕ್ ಖಾಲಿ ಯಿರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ https://karnatakabank.online-ap1.com/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 63,000 ರೂ. ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ನಿಗದಿ ಮಾಡಲಾಗಿದ್ದು, ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ karnatakabank.com ವೆಬ್ ಸೈಟ್‌ಗೆ ಭೇಟಿ ನೀಡಬಹುದು.

karnatakabank.com

ಇದನ್ನು ಓದಿ: Gruha Lakshmi Yojana: ರಾಜ್ಯ ‘ಗೃಹಲಕ್ಷ್ಮೀ’ಯರಿಗೆ ಹೊಸ ಸುದ್ದಿ- ಹಣ ಪಡೆಯಲು ಹೀಗೆ ಮಾಡಲು ಸಚಿವ ಮಧು ಬಂಗಾರಪ್ಪನವರಿಂದ ಸೂಚನೆ