New Ration Card: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಹಾಕಿದವರಿಗೆ ಬೊಂಬಾಟ್ ನ್ಯೂಸ್- ಇಂತವರ ಅರ್ಜಿ ಸ್ವೀಕರಿಸಿದ ಇಲಾಖೆ !! ನಿಮ್ಮದೂ ಉಂಟಾ ಚೆಕ್ ಮಾಡಿ
Karnataka news APL BPL new ration card update food department starts application disposal
New Ration Card: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಗಳ ಫಲಾನುಭವಿಗಳಿಗೆ ರೇಷನ್ ಕಾರ್ಡ್ ಕಡ್ಡಾಯಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
ಈಗಾಗಲೇ ರಾಜ್ಯ ಆಹಾರ ಇಲಾಖೆಯಿಂದ ಕೆಲ ದಿನಗಳ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ, ಹೊಸ ಕಾರ್ಡ್ ಗೆ( New Ration Card) ಅರ್ಜಿ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿತ್ತು. ಈ ವೇಳೆಯಲ್ಲಿ ಅರ್ಜಿ ಸಲ್ಲಿಸಿದ್ದವರಿಗೆ, ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ್ದಂತ ಅರ್ಜಿಗಳನ್ನು ಪರಿಶೀಲನೆ ನಡೆಸಿ, ವಿಲೇವಾರಿ ಮಾಡೋ ಕಾರ್ಯವನ್ನು ಆರಂಭಿಸಲಾಗಿದೆ.
ಹೌದು, ಆಹಾರ ಇಲಾಖೆಯಿಂದ ಹೊಸದಾಗಿ ರೇಷನ್ ಕಾರ್ಡ್ ಗಾಗಿ (New Ration Card) ಸುಮಾರು 3 ಲಕ್ಷ ಅರ್ಜಿಗಳನ್ನು ಸಲ್ಲಿಸಲಾಗಿತ್ತು, ಅದರಲ್ಲಿ ಹೊಸ BPL, APL ರೇಷನ್ ಕಾರ್ಡ್ ಗೆ ಸಲ್ಲಿಸಿದ್ದವರಿಗಾಗಿ ಸುಮಾರು 20 ಸಾವಿರ ಪಡಿತರ ಚೀಟಿಗಳ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡೋ ಕಾರ್ಯ ಆರಂಭಿಸಲಾಗಿದೆ.