Menstruation leave: ಮುಟ್ಟಿನ ರಜೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ಮೃತಿ ಇರಾನಿ !!

Smriti Irani give big Update regarding menstruation leave

Share the Article

Smriti Irani: ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani)ಮುಟ್ಟು(Menstruation) ಎಂಬುದು ಅಂಗವೈಕಲ್ಯವಲ್ಲ ಹೀಗಾಗಿ, ಮಹಿಳೆಯರಿಗೆ ವೇತನ ಸಹಿತ ರಜೆಯ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನೆಗೆ ಸ್ಮೃತಿ ಇರಾನಿ ಉತ್ತರ ನೀಡಿದ್ದು, ಎಲ್ಲಾ ಕೆಲಸದ ಸ್ಥಳಗಳಲ್ಲಿ ವೇತನ ಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಕುರಿತಂತೆ ಸರ್ಕಾದ ಮುಂದೆ ಯಾವುದೇ ಪ್ರಸ್ತಾವನೆಯಿಲ್ಲ ಎಂದು ತಿಳಿಸಿದ್ದಾರೆ. ಋತುಚಕ್ರ ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆಯಾಗಿದ್ದು, ಮಹಿಳೆಯರ ಕೆಲಸಕ್ಕೆ ಯಾವುದೇ ರೀತಿ ಅಡ್ಡಿಯಾಗುವುದಿಲ್ಲ. ಅಷ್ಟೇ ಅಲ್ಲದೆ ಋತು ಚಕ್ರ ಅಂಗವೈಕಲ್ಯವಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜಾರಿಗೆ ತಂದಿರುವ ಮಿಷನ್ ಶಕ್ತಿಯ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ತಯಾರಿಸಿದ್ದು,ಕೇಂದ್ರ 10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದಿದ್ದಾರೆ.

ಇದನ್ನು ಓದಿ: Chikkamagaluru tourist Spots: ಪ್ರವಾಸಿಗರೇ ಗಮನಿಸಿ- ಇಷ್ಟು ದಿನ ಬಂದ್ ಆಗಲಿದೆ ಚಿಕ್ಕಮಗಳೂರಿನ ಪ್ರಸಿದ್ದ ಈ ಟೂರಿಸ್ಟ್ ಪ್ಲೇಸ್’ಗಳು !!

Leave A Reply