Nandini Milk: ನಂದಿನಿ ಹಾಲು ಗ್ರಾಹಕರಿಗೆ ಬ್ಯಾಡ್ ನ್ಯೂಸ್- ಹೊಸ ವರ್ಷಕ್ಕೆ ದರದಲ್ಲಿ ಭಾರೀ ಏರಿಕೆ?!

Nandini Milk: ಹೊಸ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಬಿಗ್ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಹೊಸ ವರ್ಷದಲ್ಲಿ ನಂದಿನಿ ಹಾಲು (Nandini Milk Price hike), ಮೊಸರು ದರ (Curd price) ಹೆಚ್ಚಳ ಆಗುವುದು ಬಹುತೇಕ ಪಕ್ಕಾ ಎನ್ನಲಾಗಿದೆ.

ಕಳೆದ ಆಗಸ್ಟ್ 1ರಿಂದ ಹಾಲಿನ ದರದಲ್ಲಿ(Nandini Milk) 3 ರೂ.ಗಳಷ್ಟು ಹೆಚ್ಚಳ ಮಾಡಲಾಗಿದ್ದು, ಮೊಸರಿನ ದರ ಸೇರಿದಂತೆ ಇನ್ನಿತರ ಉತ್ಪನ್ನಗಳ ದರ ಕೂಡ ಹೆಚ್ಚಳವಾಗಿದೆ. ಇದೀಗ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ (KMF) ಚಿಂತನೆ ನಡೆಸಿದ್ದು, ಸರ್ಕಾರ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ನಂದಿನಿ ಹಾಲಿನ ದರ ಹೆಚ್ಚಳದ ಕುರಿತು ಪಶು ಸಂಗೋಪನೆ ಖಾತೆ ಸಚಿವ ಕೆ. ವೆಂಕಟೇಶ್ ಮಾಹಿತಿ ನೀಡಿದ್ದು, ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ. ಇತರೆ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆಯಿದ್ದು, ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿರುವ ಹಿನ್ನೆಲೆ ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ದರ ಹೆಚ್ಚಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: Shreyas Talpade: ಬಾಲಿವುಡ್ ಖ್ಯಾತ ಯುವ ನಟನಿಗೆ ಹೃದಯಾಘಾತ

ಹಾಲು ಒಕ್ಕೂಟಗಳಿಗೆ ಆಗುತ್ತಿದ್ದ ನಷ್ಟವನ್ನು ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎಂದು ಕೆಎಂಎಫ್‌ಗೆ ಮನವಿ ಸಲ್ಲಿಸಿದ್ದು, ಹೀಗಾಗಿ ಉನ್ನತ ಮಟ್ಟದಲ್ಲಿ ದರ ಏರಿಕೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತಂತೆ ಜನವರಿಯಲ್ಲಿ 14 ಹಾಲು ಒಕ್ಕೂಟಗಳ ಸಭೆ ಕರೆಯಲು ಕೆಎಂಎಫ್‌ ಮುಂದಾಗಿದೆ ಎನ್ನಲಾಗಿದೆ. ಇಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ನಂತರ ವರದಿ ಸಿದ್ಧಪಡಿಸಿಕೊಂಡು KMF ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಯೋಜನೆ ರೂಪಿಸಿದೆ ಎನ್ನಲಾಗಿದೆ.

Leave A Reply

Your email address will not be published.