Home Education Madhu Bangarappa: 2,500 ದೈಹಿಕ ಶಿಕ್ಷಕರ ನೇಮಕ್ಕೆ ಗ್ರೀನ್ ಸಿಗ್ನಲ್- ಸಚಿವರಿಂದ ಹೊಸ ಘೋಷಣೆ

Madhu Bangarappa: 2,500 ದೈಹಿಕ ಶಿಕ್ಷಕರ ನೇಮಕ್ಕೆ ಗ್ರೀನ್ ಸಿಗ್ನಲ್- ಸಚಿವರಿಂದ ಹೊಸ ಘೋಷಣೆ

Hindu neighbor gifts plot of land

Hindu neighbour gifts land to Muslim journalist

Madhu Bangarappa: ಬೆಳಗಾವಿಯಲ್ಲಿ ಸತತ 15 ವರ್ಷದಿಂದ ನೇಮಕಾತಿಗೆ ಎದುರು ನೋಡುತ್ತಿದ್ದ ಪ್ರಾಥಮಿಕ‌ ಶಾಲೆ ದೈಹಿಕ ಶಿಕ್ಷಕರಿಗೆ (P.T Teachers Recruitment)ಸರ್ಕಾರ ಸಂತಸದ ಸುದ್ದಿ ನೀಡಿದೆ. ಪ್ರಾಥಮಿಕ ಶಾಲೆಯ 2,120 ಮತ್ತು ಪ್ರೌಢಶಾಲೆಯ 200 ದೈಹಿಕ ಶಿಕ್ಷಕರ ಹುದ್ದೆ ಖಾಲಿಯಿದ್ದು, ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿರುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa)ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ 6772 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಮಂಜೂರಾಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಈ ನಿಟ್ಟಿನಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಸದ್ಯ, ಇಲಾಖೆಯ ಸಮಾಲೋಚನೆ ನಡೆಸುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸದ್ಯ,15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿದ್ದು, ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿರುವ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: Home Care: ಚಳಿಗಾಲ ಶುರುವಾಯ್ತು, ಸೊಳ್ಳೆ ಕಾಟ ಹೆಚ್ಚಾಯ್ತು – ಹೀಗೆ ಮಾಡಿದ್ರೆ ಒಂದು ಸೊಳ್ಳೆಯೂ ಹತ್ತಿರ ಸುಳಿಯಲ್ಲ!!

ಅದೇ ರೀತಿ, ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಹಾಗೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಯಿದ್ದು, ಇದರಲ್ಲಿ 5210 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದ್ದು, ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಒಳಗೊಂಡಂತೆ ಒಟ್ಟು 2500 ಶಿಕ್ಷಕರುಗಳ ಹುದ್ದೆ ಖಾಲಿಯಿದೆ. ಇದರ ಜೊತೆಗೆ 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿನ ಅನುಸಾರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ.