Rashmika Mandanna: ರಶ್ಮಿಕಾ ಮಂದಣ್ಣ ಮೇಲೆ ಮತ್ತೊಮ್ಮೆ ಡೀಪ್ ಫೇಕ್ ಅಟ್ಯಾಕ್!

Share the Article

Rashmika Mandanna: ಹಲವಾರು ಸ್ಟಾರ್ ನಟಿಯರಿಗೆ ಸಿನಿರಂಗದಲ್ಲಿ ಕಳೆದ ಕೆಲ ದಿನಗಳ ಹಿಂದೆ ಸಂಚಲನ ಸೃಷ್ಟಿಸಿರುವ ಡೀಪ್‌ ಫೇಕ್‌ ವಿಡಿಯೋ ವಿಚಾರದಲ್ಲಿ ಸಮಸ್ಯೆ ಆಗುತ್ತಿದೆ. ಈಗಾಗಲೇ ಬಹುಭಾಷ ನಟಿ ಖ್ಯಾತ ರಶ್ಮಿಕಾ ಮಂದಣ್ಣ ಅವರ ಲುಕ್ (Rashmika Mandanna) ಡೀಪ್‌ಫೇಕ್ ಜಾಲಕ್ಕೆ ಸಿಲುಕಿತ್ತು. ಇದೀಗ ಮತ್ತೊಮ್ಮೆ

ತಿಂಗಳ ಹಿಂದೆಯಷ್ಟೇ ರಶ್ಮಿಕಾ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಇದೀಗ ಇದಕ್ಕೆ ಸಾಕ್ಷಿಯಾಗಿದೆ.

ಡೀಪ್‌ಫೇಕ್ ವಿಡಿಯೋ ಮಾಡುವ ದುರುಳರ ವಿರುದ್ಧ ಕ್ರಮಕ್ಕೆ ಹಲವರು ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್‌ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಅಟ್ಟಹಾಸ ಮುಂದುವರೆದಿದೆ.

ಈಗಾಗಲೇ ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಬದಲು ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸದ್ಯ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ ಇಂತಹ ಮಾರ್ಫಿಂಗ್ ನಿಯಂತ್ರಣ ಜಾಲತಾಣಗಳ ವಿಡಿಯೋಗಳ ಸಾಮಾಜಿಕ ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್ ಗೆ ಎಳೆಯಬಹುದು ಸ್ಪಷ್ಟಪಡಿಸಿದೆ ಎನ್ನಲಾಗಿದೆ.

 

 

Leave A Reply