Home Health Mask Rule: ಕೊರೊನಾ ಹೆಚ್ಚಳ – ರಾಜ್ಯದಲ್ಲಿನ್ನು ಮಾಸ್ಕ್ ಕಡ್ಡಾಯ !!

Mask Rule: ಕೊರೊನಾ ಹೆಚ್ಚಳ – ರಾಜ್ಯದಲ್ಲಿನ್ನು ಮಾಸ್ಕ್ ಕಡ್ಡಾಯ !!

Mask Rule

Hindu neighbor gifts plot of land

Hindu neighbour gifts land to Muslim journalist

Mask Rule: 60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯ (mask rule) ಮಾಡಲಾಗಿದೆ ಎಂದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಓಡಾಡದೆ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಸಹಜ ಸ್ಥಿತಿಯಲ್ಲಿ ಇದೆ. ಯಾವುದೇ ರೀತಿಯಾದ ನಿರ್ಬಂಧ ವಿಲ್ಲ. ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದರೆ ಮಾತ್ರ ನಿರ್ಬಂಧದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ. ಶೀತ, ಜ್ವರ,ಕೆಮ್ಮು ಇರುವವರು ಕೊರೊನ ಟೆಸ್ಟ್ ಮಾಡಿಸಿಕೊಳ್ಳಬೇಕು ಹೆಚ್ಚು ಪಾಸಿಟಿವ್ ಬಂದರೆ ಅಷ್ಟೇ ನಿಷೇಧ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸದ್ಯ ಕೊರೊನ ರೂಪಾಂತರ ತಡೆಯ ಬಗ್ಗೆ ಯಾರೂ ಕೂಡ ಭಯಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟ ವೃದ್ಧರು ಎಲ್ಲರೂ ತಪಾಸನೆ ಮಾಡಿಕೊಳ್ಳಬೇಕು. ಕರೋನ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ ಧರಿಸಿ. ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ ಎಂದರು. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್ ಪಿಪಿಇ ಕಿಟ್ ಆಕ್ಸಿಜನ್ ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇರಳ ಗಡಿ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ: ಕಡಬ:ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ!! ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳ ಸಾಧಕರಿಗೆ ಸನ್ಮಾನ