Indira Canteen: ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ – ಹೊಸ ತಿಂಡಿಗಳ ಲಿಸ್ಟ್ ನೋಡಿದ್ರೆ ಬಾಯಲ್ಲಿ ನೀರು ಬರೋದು ಪಕ್ಕಾ !!

Indira Canteen: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೊಸ ಮೆನು ನಿಗಧಿ ಆಗಿದೆ. ಹೌದು, ಹೊಸ ವರ್ಷ ಆರಂಭಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್‌ ( Indira Canteen) ಊಟದ ಹೊಸ ಮೆನುವನ್ನು ಬಿಡುಗಡೆ ಮಾಡಿದ್ದಾರೆ.

ಹೊಸ ಮೆನುವಿನಲ್ಲಿ ರಾಗಿಮುದ್ದೆ-ಸೊಪ್ಪಿನ ಸಾರು, ಮಂಗಳೂರು ಬನ್ಸ್ ಸೇರಿ ರಾಜ್ಯದ ಎಲ್ಲ ಪ್ರದೇಶದ ಊಟಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ, 2017ರಿಂದ ಈವರೆಗೆ ಒಂದೇ ಮಾದರಿಯ ಬೆಲೆಯನ್ನು ನಿಗದಿಪಡಿಸಲಾಗಿದೆ.

ಇದನ್ನು ಓದಿ: ಮನೆಯೊಳಗೆ ಚಿಟ್ಟೆ ಬಂದರೆ ಏನಾಗುತ್ತೆ? ಶಕುನನ ಅಥವಾ ಶುಭ ಶಕುನ?

ಬೆಂಗಳೂರಿನಲ್ಲಿ 2017ರಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಯಿತು. ಆರಂಭದಿಂದಲೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪ್ಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡುವುದಕ್ಕೆ ಸರ್ಕಾರವೇ ಈಗ ಅನುಮತಿ ನೀಡಿದೆ. ಹಿರಿಯ ನಾಗರಿಕರು, ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಮೊದಲಾದವರು ಕೇವಲ ರೈಸ್‌ ಪದಾರ್ಥದ ಊಟ ಬೇಡ, ಮುದ್ದೆ, ಚಪ್ಪಾತಿ ನೀಡುವಂತೆ ಕೇಳುತ್ತಿದ್ದರು. ಈ ವಿಚಾರ ಸರ್ಕಾರ ಮತ್ತು ಬಿಬಿಎಂಪಿ ಗಮನಕ್ಕೆ ಬಂದಿತ್ತು. ಹಾಗಾಗಿ, ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್‌ ನಲ್ಲಿ ಕಡ್ಡಾಯವಾಗಿ ಮುದ್ದೆ ಪೂರೈಕೆಗೆ ತೀರ್ಮಾನಿಸಲಾಗಿದೆ.

Leave A Reply

Your email address will not be published.