Ration Card cancelled: ಈ BPL ಕಾರ್ಡ್ ದಾರರಿಗೆ ಬಿಗ್ ಶಾಕ್- ಸದ್ಯದಲ್ಲೇ ಕಾರ್ಡ್ ರದ್ದು !!

Share the Article

Ration Card cancelled: ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡಲು (Ration Card cancelled) ಮುಂದಾಗಿದೆ. ಹೌದು, ಅರ್ಹ ಪಡಿತರ ಚೀಟಿದಾರರು, ಯಾರು ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರಿಗೆ ಬಿಗ್ ಶಾಕ್ ಕಾದಿದೆ.

ಈಗಾಗಲೇ ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ರದ್ದಾಗಲಿದೆ ಎಂದು ತಿಳಿದು ಬಂದಿದೆ. ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.

ಇದನ್ನು ಓದಿ: Congress : ಡಿಕೆಶಿ, ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್!!

ಮಾಹಿತಿ ಪ್ರಕಾರ ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್‌ ಕಾರ್ಡ್ ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ. ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಪಿಂಚಣಿ ಹಾಗೂ ಆರ್‌ಟಿಇ ಅಡಿ ಶಿಕ್ಷಣ ಸೇರಿ ಹಲವು ಸರ್ಕಾರಿ ಸೌಕರ್ಯ , ಪಡೆದುಕೊಳ್ಳುವ ನಿಟ್ಟಿನಲ್ಲಿ ಲಕ್ಷಾಂತರ ಮಂದಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಆದರೂ ಕೆಲವರು ಆರು ತಿಂಗಳಿನಿಂದ ರೇಷನ್‌ ಪಡೆದಿಲ್ಲ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ. ಅಂತಹ ಪಡಿತರ ಚೀಟಿಯ ಸಮೀಕ್ಷೆ ನಡೆಸಲು ಆಹಾರ ಇಲಾಖೆ ಮುಂದಾಗಿದೆ.

Leave A Reply