Yuvanidhi Scheme: ಇವರೆಲ್ಲರ ಖಾತೆಗೆ ಈ ದಿನ ಜಮಾ ಆಗುತ್ತೆ ‘ಯುವನಿಧಿ’ ಹಣ !!
Yuvanidhi Scheme: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪೈಕಿ, ಯುವನಿಧಿ ಯೋಜನೆ (Yuvanidhi Scheme) ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ. ಸದ್ಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿ.26 ರಂದು ವಿಧಾನಸೌಧದಲ್ಲಿ, ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ, ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಯುವನಿಧಿ ಯೋಜನೆ ಪ್ರಕಾರ, ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ಭತ್ಯೆ ನೀಡಲಾಗುತ್ತದೆ. ಆದರೆ 2022-23ನೇ ಸಾಲಿನಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿದವರು ಅರ್ಹರಾಗಿರುತ್ತಾರೆ. ಆದರೇ ಉನ್ನತ ಶಿಕ್ಷಣ ಅಥವಾ ಇನ್ನು ಉದ್ಯೋಗಕ್ಕೆ ಸೇರದೇ ಇರುವವರಿಗೆ ಮಾತ್ರ ಈ ನಿರುದ್ಯೋಗ ಯೋಜನೆಯ ಭತ್ಯೆಯನ್ನು ನೀಡಲಾಗುತ್ತದೆ. ಮೊದಲ ಕಂತಿನ ಹಣ 2024 ರ ಜನವರಿ ತಿಂಗಳಿಂದಲೇ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ:
ಯುವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಬೇಟಿ ನೀಡಬೇಕಾಗುತ್ತದೆ.
ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಕರ್ನಾಟಕದವರಾಗಿರಬೇಕು. ಅಭ್ಯರ್ಥಿ ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ) ಬ್ಯಾಂಕ್ ಖಾತೆ ವಿವರ ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿ ಸಲ್ಲಿಸಬೇಕಾಗುತ್ತದೆ.
ಇದನ್ನು ಓದಿ: Ration Card cancelled: ಈ BPL ಕಾರ್ಡ್ ದಾರರಿಗೆ ಬಿಗ್ ಶಾಕ್- ಸದ್ಯದಲ್ಲೇ ಕಾರ್ಡ್ ರದ್ದು !!