Hijab Ban: ಕರ್ನಾಟಕದ ಹಿಜಾಬ್‌ ನಿಷೇಧ ವಾಪಸ್‌- ಸಿಎಂ ಸಿದ್ದರಾಮಯ್ಯ ಘೋಷಣೆ!!!

Share the Article

Hijab Case: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಸಿ ಎಂ ಅವರು ಬಿಜೆಪಿ ಸರಕಾರ ಹಿಜಾಬ್‌ ನಿಷೇಧ ಮಾಡಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಉಡುಪು ಧರಿಸುವುದು ಅವರ ಇಷ್ಟ. ಬಟ್ಟೆ ತೊಡುವುದು, ಊಟ ಮಾಡುವುದು ನಿಮಗೆ ಸೇರಿದ್ದು. ಅದಕ್ಕೆ ನಾವು ಏಕೆ ಅಡ್ಡಿಪಡಿಸಲಿ? ಬಟ್ಟೆ ಜಾತಿ ಆಧಾರದ ಮೇಲೆ ಬಿಜೆಪಿ ಜನರನ್ನು ವಿಭಜಿಸುತ್ತಿದೆ ಎಂದು ಹೇಳಿದರು. ನಮ್ಮ ಸರಕಾರ ಬಡವರಿಗಾಗಿ ಕೆಲಸ ಮಾಡುತ್ತಿದೆ. ರಾಜಕೀಯ ಮಾಡಬಾರದು. ಸಮಾಜದಲ್ಲಿ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Leave A Reply