Ram Mandir Inauguration: ರಾಮಮಂದಿರ ಉದ್ಘಾಟನೆಗೆ ಸೀತಾಮಾತೆಯ ತವರಾದ ನೇಪಾಳದಿಂದ ಉಡುಗೊರೆಗಳ ಸುರಿಮಳೆ! ಏನಿಲ್ಲ ಬಂದಿದೆ ನೋಡಿ

ಮುಂದಿನ ತಿಂಗಳು ಅಂದರೆ ಜನವರಿಯಲ್ಲಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಗಲಿದೆ. ಭರಿದಿಂದ ಸಿದ್ಧತೆ ಕೂಡ ನಡೆಯುತ್ತಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆ ವಿಶೇಷ ಉಡುಗೊರೆ ನೀಡಿ ವಿಶ್‌ ಮಾಡಲು ನೆರೆ ರಾಷ್ಟ್ರ ನೇಪಾಳ ಸಿದ್ಧತೆ ಮಾಡಿಕೊಂಡಿದೆ ಎಂದು ಎಲ್ಲೆಲ್ಲೂ ವಿಷಯ ಹರಿದಾಡುತ್ತಿದೆ.

ಹೌದು, ನೇಪಾಳದಿಂದ ಅಯೋಧ್ಯೆಗೆ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳನ್ನು ಒಳಗೊಂಡ ವಿಶೇಷ ಸ್ಮಾರಕಗಳನ್ನು ಕಳುಹಿಸಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಷ್ಟ್ಪೀಯ ಮಾಧ್ಯಮಗಳು ವರದಿ ಮಾಡಿದ್ದು, ಸ್ಮರಣಿಕೆಗಳನ್ನು ವಿತರಿಸಲು ಜನಕಪುರಧಾಮ-ಅಯೋಧ್ಯಧಾಮ ಪ್ರಯಾಣವನ್ನು ಕೈಗೊಳ್ಳಲಾಗುವುದು ಎಂದು ಮೈ ರಿಪಬ್ಲಿಕಾ ಪತ್ರಿಕೆ ವರದಿ ಮಾಡಿದೆ.

ಜನವರಿ 18 ರಂದು ಪ್ರಾರಂಭವಾಗುವ ಪ್ರಯಾಣವು ಜನವರಿ 20 ರಂದು ಅಯೋಧ್ಯೆಯಲ್ಲಿ ಮುಕ್ತಾಯಗೊಳ್ಳಲಿದೆ ಮತ್ತು ಅದೇ ದಿನ ಸ್ಮಾರಕಗಳನ್ನು ಶ್ರೀ ರಾಮ ಜನ್ಮಭೂಮಿ ರಾಮಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಜಾನಕಿ ದೇವಸ್ಥಾನದ ಜಂಟಿ ಮಹಾಂತ ರಾಮರೋಷನ್ ದಾಸ್ ವೈಷ್ಣವ್ ತಿಳಿಸಿದ್ದಾರೆ.

ಇದನ್ನು ಓದಿ: Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೇಗೆ ಹೂಡಿಕೆ ಮಾಡಬಹುದು? ಎಷ್ಟು ಬಡ್ಡಿ ಸಿಗಲಿದೆ ಗೊತ್ತಾ?

ಜನವರಿ 22 ರಂದು ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು, ಜನಕ್‌ಪುರಧಾಮ್‌ನಿಂದ ಜಲೇಶ್ವರ ನಾಥ್, ಮಲಂಗ್ವಾ, ಸಿಮ್ರೌಂಗಧ್, ಗಧಿಮಾಯಿ, ಬಿರ್‌ಗುಂಜ್ ಮೂಲಕ ಬೇಟಿಯಾ, ಕುಶಿನಗರ, ಸಿದ್ಧಾರ್ಥನಗರ, ಗೋರಖ್‌ಪುರ ಮಾರ್ಗವಾಗಿ ಉತ್ತರ ಪ್ರದೇಶದ ಅಯೋಧ್ಯೆ ತಲುಪಲಿದೆ.

ಇದಕ್ಕೂ ಮುನ್ನ ನೇಪಾಳದ ಕಾಳಿಗಂಡಕಿ ನದಿ ದಡದಿಂದ ಸಂಗ್ರಹಿಸಿದ ಶಾಲಿಗ್ರಾಮ ಕಲ್ಲುಗಳನ್ನು ಶ್ರೀರಾಮನ ಪ್ರತಿಮೆ ಮಾಡಲು ಅಯೋಧ್ಯೆಗೆ ಕಳುಹಿಸಲಾಗಿದ್ದು, ಉದ್ಘಾಟನಾ ದಿನದಂದು ಅದನ್ನು ದೇವಾಲಯದಲ್ಲಿ ಸ್ಥಾಪಿಸಲಾಗುವುದು ಎಂದು ಪತ್ರಿಕೆ ತಿಳಿಸಿದೆ.

ಇದರ ಜೊತೆಗೆ ಜನವರಿ 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಮಂದಿರಕ್ಕೆ ಹಲವಾರು ಸೆಲೆಬ್ರಿಟೀಸ್​ಗಳಿಗೂ ಇನ್ವಿಟೇಷನ್​ ಬಂದಿದೆ ಅಂತೆ. ಯಶ್​, ರಿಶಭ್​ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಇಲ್ಲಿಗೆ ಭೇಟಿ ನೀಡಲಿದ್ದಾರೆ.

Leave A Reply

Your email address will not be published.