Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ; ಕೇವಲ ಇದೊಂದು ಕೆಲಸ ಗೃಹಲಕ್ಷ್ಮಿ ಶಿಬಿರದಲ್ಲಿ ಮಾಡಿ, ಹಣ ಪಡೆಯಿರಿ!

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಫಲಾ ನುಭವಿಗಳಿಗೆ(Gruha Lakshmi benificiaries) ಮುಖ್ಯ ಮಾಹಿತಿ ಇಲ್ಲಿದೆ ನೋಡಿ!!!ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme Money)ಹಣ ಬಾರದೆ ಇರುವವರು ತಪ್ಪದೇ ಈ ಕೆಲಸಗಳನ್ನು ಮಾಡಿ ಬಿಡಿ!!

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಡಿ.27 ರಿಂದ 29 ರವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ 3 ದಿನಗಳ ಕಾಲ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಶಿಬಿರ 3 ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಆಧಾ‌ರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇಕೆವೈಸಿ ಅಪ್ಲೆಡ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಸಮಸ್ಯೆಗಳನ್ನು ತಪ್ಪಿಸಿ , ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಇದನ್ನು ಓದಿ: Madhu Bangarappa: ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ!!!

ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಅನುಭವಿಸುತ್ತಿರುವ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆಯಲು ಮನವಿ ಮಾಡಲಾಗಿದೆ. ಫಲಾನುಭವಿಗಳು ನಿಗದಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಶಿಬಿರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ, ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗೆ ಪರಿಹಾರ ಪಡೆಯಬಹುದು.

Leave A Reply

Your email address will not be published.