Mangalore: ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ವಶಕ್ಕೆ!!
Mangalore: ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.
ನಿಯಮಾನುಸಾರ ನೊಂದಣಿ ಮಾಡದೆ ಪತ್ತೆಯಾದ ಸ್ಕ್ಯಾನಿಂಗ್ ಯಂತ್ರವೊಂದು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.
ನಿಯಮಾನುಸಾರ ಸ್ಕ್ಯಾನಿಂಗ್ ಯಂತ್ರವನ್ನು ನೋಂದಣಿ ಮಾಡದ ಕಾರಣ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಗಿದೆ.