Death news: ಅಭಿಮಾನಿಗಳ ಕುಟುಂಬದವರಿಗೆ ಸಾಂತ್ವಾನ ಹೇಳಿ ಬರುವಾಗ ಮತ್ತೊಂದು ಅವಘಡ – ಯಶ್ ಮತ್ತೊಬ್ಬ ಅಭಿಮಾನಿಯ ದಾರುಣ ಸಾವು !!

Share the Article

Death news: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗುವಾಗ ಬೆಂಗಾವಲಾಗಿ ಬಂದಿದ್ದ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Annapoorani: ಬಹುಭಾಷಾ ನಟಿ ನಯನತಾರ ನಟನೆಯ ‘ಅನ್ನಪೂರ್ಣಿ’ ತಂಡಕ್ಕೆ ಸಂಕಷ್ಟ: ರಾಮನನ್ನು ಮಾಂಸಹಾರಿ ಎಂದು ಬಿಂಬಿಸಿದ ಆರೋಪ: ಚಿತ್ರತಂಡದ ವಿರುದ್ದ FIR ದಾಖಲು!!

ಹೌದು, ರಾಕಿಂಗ್ ಸ್ಟಾರ್ ಯಶ್(Rocking star yash) ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ(Gadaga) ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಹುಬ್ಬಳ್ಳಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗುವಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಗಾಯಳು ನಿಖಿಲ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿಖಿಲ್ ಚಿಕಿತ್ಸೆ ಫಲಿದಸೇ ಸಾವನ್ನಪ್ಪಿದ್ದಾನೆ. ಗಾಯಳು ನಿಖಿಲ್‌ನನ್ನ ಗದಗ ನಗರದ ಜಿಮ್ಸ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ಶಿಫ್ಟ್ ಮಾಡಿದ್ದರು. ಆದರೂ ಕೂಡ ಚಿಕಿತ್ಸೆ ಫಲಿಸದೇ ನಿಖಿಲ್ ಸಾವನ್ನಪ್ಪಿದ್ದಾನೆಂದು ಕುಟುಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Leave A Reply