School-collage holiday: ರಾಮ ಮಂದಿರ ಉದ್ಘಾಟನೆಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ !!

Share the Article

School-collage holiday: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು ದೇಶಾದ್ಯಂತ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇದೀಗ ಉತ್ತರ ಪ್ರದೇಶವು ಜನವರಿ 22ರಂದು ತಮ್ಮ ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ(School-collage holiday) ಘೋಷಿಸಿದೆ.

ಹೌದು, ರಾಮ ಮಂದಿರ ಉದ್ಘಾಟನೆಗೆ ದೇಶಾದ್ಯಂತ ಪ್ರಧಾನಿಯವರು ರಜೆ ಘೋಷಿಸಬೇಕೆಂದು ಕೆಲವು ರಾಜ್ಯದ ಮುಖ್ಯಮಂತ್ರಿಗಳು ಆಗ್ರಹಿಸಿದ್ದರು. ಈ ಬೆನ್ನಲ್ಲೇ ರಾಮನ ತವರು ರಾಜ್ಯವಾದ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ.

ಇದನ್ನೂ ಓದಿ: Gurukiran House: ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ ಮನೆಯಲ್ಲಿ ಕಳ್ಳತನ!!

ಯೋಗಿ ಸರ್ಕಾರವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದರ ಜೊತೆಗೆ, ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ. ಜೊತೆಗೆ ಜನವರಿ 14ರಂದು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

Leave A Reply