Dress Code: ದೇವಾಲಯಗಳಲ್ಲಿ ಹೊಸ ವಸ್ತ್ರ ಸಂಹಿತೆ ಜಾರಿ: ಇನ್ನೂ ಮುಂದೆ ಈ ಬಟ್ಟೆ ಧರಿಸಿದವರಿಗೆ ಪ್ರವೇಶ ನಿರ್ಬಂಧ!!
Dress Code: ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಅಭಿಯಾನ ನಡೆಸಲಿದೆ. ಇಂದಿನಿಂದ ಬೆಂಗಳೂರಿನ(Bengaluru) ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ (Dress Code) ಜಾರಿಯಾಗುತ್ತಿದೆ.
ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶವಿರದು. ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ. (ಜ.10) ಅಂದರೆ ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಹೀಗಾಗಿ, ಇನ್ನೂ ಮುಂದೆ ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬಂದರೆ ಪ್ರವೇಶ ನಿರಾಕರಿಸಲಾಗುತ್ತದೆ.
ಇದನ್ನೂ ಓದಿ: Ration Card ಇರುವ ಎಲ್ಲರಿಗೂ ಬಂತು ಹೊಸ ರೂಲ್ಸ್: ಈ ದಿನದಿಂದಲೇ ರೇಷನ್ ವಿತರಣೆ ಬಂದ್!!
ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಪುರುಷರು ಅಂಗಿ ಧರಿಸಿ ದೇವಾಲಯದೊಳಗೆ ಹೋಗುವಂತಿಲ್ಲ. ಇನ್ನು ಮುಂದೆ ಬೆಂಗಳೂರು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಇಂದಿನಿಂದ ಜಾರಿಗೆ ಬರಲಿದೆ. ವಸ್ತ್ರ ಸಂಹಿತೆ ಅನುಸಾರ, ಪುರುಷರು ದೇವಾಲಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಹೀಗೆ ಬಂದರೆ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.