School Timings: ನಾಳೆ ಶಾಲೆ ಸಮಯದಲ್ಲಿ ಬದಲಾವಣೆ!

Share the Article

School Timing: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ 5 ನೇ ಗ್ಯಾರಂಟಿ ಯುವನಿಧಿ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯಲಿದೆ. ಶುಕ್ರವಾರ ಜ.12 ರಂದು ಫ್ರೀಡಂ ಪಾರ್ಕ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಶಾಲೆ ನಡೆಸಲು ಬಿಇಒ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯಕ್ರಮ ಹಿನ್ನೆಲೆ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ಹಲವು ರಸ್ತೆಗಳ ಮಾರ್ಗ‌ ಬದಲಾವಣೆ ಮಾಡಿರುವ ಹಿನ್ನೆಲೆ ಶಾಲಾ ಸಮಯ‌ ಬದಲಾವಣೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ‌ಬಿಇಒ‌ ಆದೇಶ ಹೊರಡಿಸಿದ್ದಾರೆ ಎಂದು ಟಿವಿ9 ಕನ್ನಡ ವರದಿ ಮಾಡಿದೆ.

ಹೀಗಾಗಿ ನಾಳೆ ಶಿವಮೊಗ್ಗ ನಗರದಲ್ಲಿ ಶಾಲೆಗಳು 10 ಗಂಟೆ ಬದಲಾಗಿ ಒಂದು ಗಂಟೆ ಮೊದಲೇ ಅಂದರೆ 9 ಗಂಟೆಗೆ ಪ್ರಾರಂಭವಾಗಲಿವೆ. ಇನ್ನು ಸಂಜೆ ಬೇಗ ಶಾಲೆ ಮುಗಿಯಲಿದೆ ಎಂದು ವರದಿಯಾಗಿದೆ.

Leave A Reply