H D Devegowda: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಮಂತ್ರಿ ಪಟ್ಟ- ದೇವೇಗೌಡರಿಂದ ಶಾಕಿಂಗ್ ಹೇಳಿಕೆ !!

H D Devegowda: ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಈ ಬೆನ್ನಲ್ಲೇ ಬಿಜೆಪಿಯ ದೋಸ್ತಿ ನಾಯಕನಾಗಿರುವ ಕುಮಾರಸ್ವಾಮಿಯವರು(H D kumarswamy) ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ ಎಂಬ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಈ ಬಗ್ಗೆ ದೇವೇಗೌಡರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಹೌದು, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ(HD Devegowda)ಅವರು ತಮ್ಮ ಮಗ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗೋ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದು, ಎಚ್‌ಡಿಕೆ ಕೇಂದ್ರ ಸಚಿವ ಆಗೋದು ಗೊತ್ತಿಲ್ಲ, ನನ್ನ ಮುಂದೆ ಆ ಬಗ್ಗೆ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೋದಿ ಯೋಚನೆಗಳು ಅವರ ಸಹೋದ್ಯೋಗಿಗಳಿಗೂ ಗೊತ್ತಾಗಲ್ಲ. ಹೀಗಾಗಿ ಅವರ ಮನದಲ್ಲಿ ಏನಿದೆಯೋ ಗೊತ್ತಿಲ್ಲ ಎಂಬುದಾಗಿಯೂ ಗೌಡರು ಹೇಳಿದ್ದಾರೆ.

ಅಲ್ಲದೆ ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧಿಸಲ್ಲ ಸದ್ಯ ರಾಜ್ಯ ಸಭೆಯಲ್ಲಿಯೇ ಇರುತ್ತೇನೆ. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ ಎಂದು ಹೇಳಿದ್ದಾರೆ.

Leave A Reply

Your email address will not be published.