Home Karnataka State Politics Updates Dr G parameshwar: ಸಂಸದ ಅನಂತ್ ಕುಮಾರ್ ಹೆಗಡೆ ಬಂಧನ ?! ಗೃಹ ಸಚಿವ ಡಾ...

Dr G parameshwar: ಸಂಸದ ಅನಂತ್ ಕುಮಾರ್ ಹೆಗಡೆ ಬಂಧನ ?! ಗೃಹ ಸಚಿವ ಡಾ ಪರಮೇಶ್ವರ್ ಅಚ್ಚರಿ ಸ್ಟೇಟ್ಮೆಂಟ್

Dr G parameshwar

Hindu neighbor gifts plot of land

Hindu neighbour gifts land to Muslim journalist

Dr G Parameshwar: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ(Anath kumar hegde) ಇದೀಗ ಸಂಚಕಾರ ಎದುರಾಗಿದ್ದು ಅವರನ್ನು ಬಂಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಕುರಿತು ಗೃಹ ಸಚಿವ ಡಾ ಪರಮೇಶ್ವರ್(Dr G parameshwar)ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಹೌದು, ಮುಖ್ಯಮಂತ್ರಿಗಳ(CM) ಕುರಿತು ಹಾಗೂ ಮಸೀದಿ ಧ್ವಂಸ ಮಾಡುವ ಕುರಿತು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿರುವ ಹೇಳಿಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸಂಸದರ ಮೇಲೆ ಎಫ್‌ಐಆರ್ ಕೂಡ ಆಗಿದೆ. ಇದರಿಂದ ಬಿಜೆಪಿ ಕೂಡ ಅಂತರ ಕಾಯ್ದುಕೊಂಡಿತ್ತು. ಈ ಬೆನ್ನಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಬಂಧಿಸುವ ಕುರಿತು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ಅನಂತ್‌ಕುಮಾರ್ ಹೆಗಡೆ(MP Ananth kumar hegde) ಬಂಧನ ಮಾಡಬೇಕಾ, ಬೇಡ್ವಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Property Tax: ಆಸ್ತಿ ತೆರಿಗೆ ಪಾವತಿದಾರರಿಗೆ ಬಿಗ್ ಅಪ್ಡೇಟ್ ಕೊಟ್ಟ DCM ಡಿ ಕೆ ಶಿವಕುಮಾರ್!?

ಈ ಬಗ್ಗೆ ಮಾತನಾಡಿದ ಅವರು ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಸಂಸದರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸಾಕ್ಷ್ಯ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಅದಾದ ಮೇಲೆ ಮುಂದಿನ ಕ್ರಮ ಏನು ಆಗಬೇಕೋ ಅದು ಕಾನೂನು ರೀತಿ ಆಗುತ್ತದೆ. ಅವರನ್ನು ಅರೆಸ್ಟ್ ಮಾಡಬೇಕಾ, ಮಾಡಬಾರದಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ. ನಾವು ಗೃಹ ಇಲಾಖೆಯಿಂದ ಯಾವುದೇ ಡೈರೆಕ್ಷನ್ ಕೊಡೋದಿಲ್ಲ. ಅವರನ್ನು ಅರೆಸ್ಟ್ ಮಾಡಿ, ಬಿಡಿ ಅಂತ ನಾನು ಯಾವತ್ತೂ ಯಾರಿಗೂ ಹೇಳಿಲ್ಲ. ಹೇಳೋದು ಇಲ್ಲ ಎಂದಿದ್ದಾರೆ.