D K Shivkumar: ಯತೀಂದ್ರನ ಬಗ್ಗೆ ಕೊನೆಗೂ ಮೌನ ಮುರಿದ ಡಿಕೆಶಿ- ಭಾರೀ ಕುತೂಹಲ ಕೆರಳಿಸಿದ ಹೇಳಿಕೆ!!

D K Shivkumar: ಮುಂಬರುವ ಲೋಕಸಭಾ ಚುನಾವಣೆಯಲ್ಲಿ(Parliament election)ಕಾಂಗ್ರೆಸ್ ಗೆದ್ದರೆ, ರಾಜ್ಯದಲ್ಲಿ ಹೆಚ್ಚು ಸ್ಥಾನ ಗಳಿಸಿದರೆ ಪೂರ್ಣಾವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಇದರಿಂದ 5ವರ್ಷವೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರನ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಕುರಿತಂತೆ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಡಿಕೆಶಿ ಮೌನ ಮುರಿದಿದ್ದಾರೆ.

ಹೌದು, ನಿನ್ನೆಯ ಕಾರ್ಯಕ್ರಮವೊಂದರಲ್ಲಿ ಯತೀಂದ್ರನ ಅವರು ತಮ್ಮ ತಂದೆಯ ಕುರಿತಂತೆ ನುಡಿದ ಭವಿಷ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಯತೀಂದ್ರ (Yathindra Siddaramaiah) ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Anger Control: ತುಂಬಾ ಕೋಪ ಬರ್ತಾ ಇದ್ಯಾ? ಹಾಗಾದ್ರೆ ಈ ರತ್ನಗಳನ್ನು ಧರಿಸಿ ಸಾಕು!

ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಯತೀಂದ್ರ ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಮಾತನ್ನು ತಿರುಚುವ ಅಗತ್ಯವಿಲ್ಲ ಎಂದು ಹೇಳಿದರು. ಅಲ್ಲದೆ ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ.

Leave A Reply

Your email address will not be published.