Home Crime Shimogga: ಪ್ರೀತಿಸಿ ಮದುವೆಯಾದ ಎಂಟೇ ತಿಂಗಳಲ್ಲಿ ನೇಣಿಗೆ ಶರಣಾದ ನವವಿವಾಹಿತೆ! ಡೆತ್‌ನೋಟ್‌ ಪತ್ತೆ!!

Shimogga: ಪ್ರೀತಿಸಿ ಮದುವೆಯಾದ ಎಂಟೇ ತಿಂಗಳಲ್ಲಿ ನೇಣಿಗೆ ಶರಣಾದ ನವವಿವಾಹಿತೆ! ಡೆತ್‌ನೋಟ್‌ ಪತ್ತೆ!!

Shimogga

Hindu neighbor gifts plot of land

Hindu neighbour gifts land to Muslim journalist

Shimoga: ಎಂಟು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಮಲೆನಾಡಿದ ನವ ವಿವಾಹಿತೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಘಟನೆಯೊಂದು ನಡೆದಿದೆ.

ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಪಂ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Accident: ಓಮ್ನಿ – ಜೀಪ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು; ಕಾರು ಫುಲ್ ಜಖಂ!!

ಶಮಿತಾ ಬಿ.ಯು (24) ಎಂಬಾಕೆಯೇ ಮೃತ ಮಹಿಳೆ. ಮೃತ ಮಹಿಳೆಯ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿರುವುದಾಗಿ ವರದಿಯಾಗಿದೆ. ಗಂಡ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆಂದು ತೆರಳಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಇವರಿಬ್ಬರು ಪ್ರೀತಿಸಿ ಮದುವೆಯಾಗಿದ್ದು, ಇವರ ಮದುವೆ ಕಳೆದ ಮಾರ್ಚ್ ನಲ್ಲಿ ನಡೆದಿತ್ತು. ರಾತ್ರಿ ಅತ್ತೆ ಮಾವನಿಗೆ ತಿಳಿಸಿ ಶರ್ಮಿತಾ ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ತೆರಳಿದ್ದರು. ಆದರೆ ಬೆಳಗಾದ ಮೇಲೆ ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದ ಕಾರಣ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡೆಯಲಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಲಭ್ಯವಾಗಿದೆ. ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.

ಮೃತದೇಹವನ್ನು ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತಹಶೀಲ್ದಾರ್ ಜಕ್ಕನ್ ಗೌಡರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ. ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ.