Gram Panchayat: ಅತೀ ಶೀಘ್ರದಲ್ಲಿ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಕ್ಕೆ ಕ್ರಮ!!

Share the Article

Gram Panchayat: ಕರ್ನಾಟಕ ಸರ್ಕಾರ(Government)ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಶೀಘ್ರವೇ ನೀಡಲಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಗೆ ತಯಾರಿ ನಡೆಸುತ್ತಿದ್ದು, ಗ್ರಾಮ ಪಂಚಾಯಿತಿ (Gram Panchayat)ಮಟ್ಟದ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ.

ಇದನ್ನೂ ಓದಿ: Gruha Jyothi Scheme:ರಾಜ್ಯ ಸರ್ಕಾರದಿಂದ ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್; ಸಂಪುಟದಿಂದ 10 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನ!!

ಗ್ರಾಮ ಲೆಕ್ಕಿಗ ಹುದ್ದೆಗಳ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda)ಮಾತನಾಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವ ಭರವಸೆ ನೀಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ. ಇದರ ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದಲ್ಲದೆ, 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯುವ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

Leave A Reply