Cooperative Bank: ಸರಕಾರದಿಂದ ಬಹು ದೊಡ್ಡ ನಿರ್ಧಾರ! ಕೊನೆಗೂ ಹೊರಬಿತ್ತು ಬಡ್ಡಿ ಮನ್ನಾ ಆದೇಶ!!!

Share the Article

Cooperative Bank: ಕಲಬುರಗಿಯ ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲವನ್ನು ಸಂಪೂರ್ಣವಾಗಿ 2024ರ ಫೆಬ್ರವರಿ 29 ರೊಳಗೆ ಕಟ್ಟಿದರೆ ಬಡ್ಡಿ ಮನ್ನಾ ಮಾಡುವ ಕುರಿತು ಸಹಕಾರಿ ಇಲಾಖೆ(Cooperative Bank) ಅಧಿಸೂಚನೆ ಶನಿವಾರ (ಜ.20) ಹೊರಡಿಸಿದೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದ ಸಂದರ್ಭ ಬರಗಾಲ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾದ ವಿಷಯದ ಮೇಲೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಅದರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.

ಈ ಬಡ್ಡಿ ಮನ್ನಾದ ಘೋಷಣೆ ಮಾಡಿ ತಿಂಗಳು ಕಳೆದರೂ ಆದೇಶ ಮಾತ್ರ ಹೊರ ಬಿದ್ದಿರಲಿಲ್ಲ. ಇದೀಗ, ಶನಿವಾರ ಜ.‌20 ರಂದು ಆದೇಶ ಹೊರಡಿಸಿದ್ದು, ಸಹಕಾರಿ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಎ.ಸಿ. ದಿವಾಕರ ಅಧಿಸೂಚನೆ ಹೊರಡಿಸಿದ್ದಾರೆ.‌

Leave A Reply