Dakshina Kannada: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ!!

Share the Article

Dakshina Kannada: ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್‌ ಠಾಣೆಯಿಂದ ಹಿಂದೂ ಮುಖಂಡ (Hindu Leader) ಅವಿನಾಶ್‌ ಪುರುಷರಕಟ್ಟೆ ಗಡಿಪಾರಿಗೆ  ನೋಟಿಸ್‌ ನೀಡಲಾಗಿದೆಯೆಂದು ವರದಿಯಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆಯೆಂದು ವರದಿಯಾಗಿದೆ.

ಅವಿನಾಶ್‌ ಅವರು ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್‌ಗೆ ಗಡಿಪಾರು ಮಾಡುವುದಾಗಿ ನೋಟಿಸ್‌ನಲ್ಲಿ ಸಹಾಯಕ ಆಯಕ್ತರ ಕಚೇರಿ ಉಲ್ಲೇಖ ಮಾಡಲಾಗಿದೆ ಎಂದು ವರದಿಯಾಗಿದೆ.

ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ.

Leave A Reply