Home Karnataka State Politics Updates CM Siddaramaiah: ಲೋಕಸಭಾ ಚುನಾವಣೆ- ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

CM Siddaramaiah: ಲೋಕಸಭಾ ಚುನಾವಣೆ- ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Hindu neighbor gifts plot of land

Hindu neighbour gifts land to Muslim journalist

CM Siddaramaiah: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ ಗೆ ಹೈಕಮಾಂಡ್‌ ಬರೋಬ್ಬರಿ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್‌ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌(D K Shivkumar)ಈ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆಲುವಿನ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: PM Kisan: ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ಶೇ.50ರಷ್ಟು ಹೆಚ್ಚಳವಾದ ಪ್ರಧಾನಿ ಕಿಸಾನ್ ಹಣ!

ಹೌದು, ಲೋಕಸಭಾ ಚುನಾವಣೆಯಲ್ಲಿ(Parliament election)ರಾಜ್ಯದಲ್ಲಿ ಕಾಂಗ್ರೆಸ್’ಗೆ ಎಷ್ಟು ಸ್ಥಾನಗಳು ಬರಲಿವೆ ಎಂಬುದರ ಬಗ್ಗೆ ಸಮೀಕ್ಷೆಗಳು ನಡೆಯುತ್ತಿವೆ. ಇದು ಕಾಂಗ್ರೆಸ್ ಗೆ ಒಂದು ಆತ್ಮವಿಶ್ವಾಸ ನೀಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ನಾವು 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗೆದ್ದೇಗೆಲ್ಲುತ್ತೇವೆ ಎಂದು ಹೊಸ ಘೋಷಣೆ ಮೊಳಗಿಸಿದ್ದಾರೆ.

ಅಲ್ಲದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಗೆಲ್ಲುವ ಸ್ಥಾನಗಳನ್ನು ನಿಖರವಾಗಿ ಹೇಳುತ್ತೇವೆ ಎಂದು ಹೇಳಿದ್ದಾರೆ.