Budget 2024: ಬಡ ಜನತೆಗೆ 300 ಯೂನಿಟ್ ಉಚಿತ ವಿದ್ಯುತ್; ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಮಹತ್ವದ ಘೋಷಣೆ!
Pradhan Mantri Suryoday Yojana: ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ 2024 ರ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯಡಿಯಲ್ಲಿ ಸೌರ ವ್ಯವಸ್ಥೆಗಳನ್ನು ಅಳವಡಿಸಿಕೊಂಡವರಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: Agriculture Budget 2024: ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಮೇಲೆ ಕೇಂದ್ರೀಕರಣ;
ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ ಕುರಿತು ಪ್ರಸ್ತಾಪಿಸಿ, ಇಂಧನ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ, ಹಾಗಾಗಿ, ಮುಂದಿನ ಕೆಲವು ವರ್ಷಗಳಲ್ಲಿ ಒಂದು ಕೋಟಿ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನೆಲ್‌ಗಳನ್ನು ಅಳವಡಿಸಲು ಸರ್ಕಾರವು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಿದೆ ಎಂದು ಅವರು ಹೇಳಿದರು. ಈ ಯೋಜನೆಯು ನಮ್ಮ ಪ್ರಧಾನಿಯವರ ನಿರ್ಣಯವಾಗಿದೆ, ಅವರು ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಇದನ್ನು ಘೋಷಣೆ ಮಾಡಿರುವುದಾಗಿ ಹೇಳಿದರು.
ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯಡಿ, ಮುಂದಿನ ಮೂರು ವರ್ಷಗಳಲ್ಲಿ ಒಂದು ಕೋಟಿ ರೂಫ್‌ಟಾಪ್ ಸೌರ ಫಲಕಗಳನ್ನು ಸ್ಥಾಪಿಸಲಾಗುವುದು, ಸರ್ಕಾರವು 2027 ರ ವೇಳೆಗೆ ಈ ಗುರಿಯನ್ನು ಪೂರ್ಣಗೊಳಿಸುತ್ತದೆ. ಇದರ ನಂತರ, ಉಳಿದ ಜನರನ್ನು ಯೋಜನೆಯೊಂದಿಗೆ ಸಂಪರ್ಕಿಸುವ ಕೆಲಸವನ್ನು ಮಾಡಬಹುದು