Home Karnataka State Politics Updates G T Devegowda: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ ಜಿ ಟಿ ದೇವೇಗೌಡ!!

G T Devegowda: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ ಜಿ ಟಿ ದೇವೇಗೌಡ!!

G T Devegowdai

Hindu neighbor gifts plot of land

Hindu neighbour gifts land to Muslim journalist

G T Devegowda: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು. ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸೆಣೆಸಲು ರೆಡಿಯಾಗಿವೆ. ಆದರೆ ಈಗ ಈ ಬೆನ್ನಲ್ಲೇ ಜೆಡಿಎಸ್(JDS) ನ ಪ್ರಬಲ ನಾಯಕ, ಶಾಸಕರಾದ ಜಿ ಟಿ ದೇವೇಗೌಡ(J T Devegowda)ಅವರು ಮೈತ್ರಿ ಕುರಿತು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಇದನ್ನೂ ಓದಿ: Malappuram Pocso Court: 11,13 ವರ್ಷದ ಅಪ್ರಾಪ್ತ ಮಕ್ಕಳ ಮೇಲೆ ತಂದೆಯಿಂದಲೇ ಅತ್ಯಾಚಾರ; 133 ವರ್ಷ ಕಠಿಣ ಸಜೆ ವಿಧಿಸಿದ ಕೇರಳ ಕೋರ್ಟ್‌

ಹೌದು, ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜತೆ ಲೋಕಸಭಾ ಚುನಾವಣಾ(Parliament election)ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಂಡಿವೆ. ಆದರೆ, ನಮ್ಮ‌ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಅದು ಎಂದೂ ಒಂದಾಗಲು ಸಾಧ್ಯವಿಲ್ಲ ಎಂದು ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಜೆಡಿಎಸ್ ಜಯಪ್ರಕಾಶ್ ನಾರಾಯಣ್(Jayaprakash narayan) ಕಟ್ಟಿದ ಪಕ್ಷವಾಗಿದೆ. ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ. ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದಿಂಚು ಕೂಡ ಬದಲಾಗಲ್ಲ ಎಂದಿದ್ದಾರೆ. ಹೆಚ್.ಡಿ‌.ಕುಮಾರಸ್ವಾಮಿ ಕೇಸರಿ ಟವೆಲ್ ಹಾಕಿದ ವಿಚಾರದ ಕುರಿತು ಮಾತನಾಡಿದ ಅವರು, ಅದು ಬಿಜೆಪಿಯವರ ಟವಲ್ ಅಲ್ಲ. ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಕೇಸರಿ ಟವೆಲ್‌ ಅನ್ನು ಹಾಕಿದ್ದಾನೆ. ಇದನ್ನು ರಾಜಕೀಯ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.