Belthangady: ತನ್ನ ಸ್ವಗೃಹದಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ! ಡೆತ್‌ ನೋಟ್‌ ಪತ್ತೆ

Share the Article

Mangaluru: ಯುವತಿಯೋರ್ವಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಯುವತಿ ವನಿತಾ ಯಾನೆ ರೇವತಿ (30) ಎಂಬಾಕೆಯೇ ಮೃತ ಯುವತಿ.

ಇವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಅನಾರೋಗ್ಯ ಸಮಸ್ಯೆಯಿಂದ ಒಂದು ತಿಂಗಳ ಹಿಂದೆ ತಮ್ಮ ಮನೆಗೆ ಬಂದಿದ್ದರು. ಇಂದು (ಫೆ.8) ಮುಂಜಾನೆ ತನ್ನ ಸ್ವಗೃಹದಲ್ಲಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Leave A Reply