CM Siddaramaiah: ಮಾಂಸದೂಟ ಮಾಡಿ ಸುತ್ತೂರು ಮಠಕ್ಕೆ ಭೇಟಿ; ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

Share the Article

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದ್ದು, ಮಾಧ್ಯಮಗಳು ಈ ಕುರಿತು ಸಿಎಂ ಅವರನ್ನು ಪ್ರಶ್ನೆ ಮಾಡಿದಾಗ, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಇಲ್ಲಿ ಕೇಳಬೇಡಿ, ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕೋದರ ಕುರಿತು ಮಾತನಾಡೋಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತನಾಡೋಣ. ಅದು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಬೇಟಿ ಹೀಗೆಲ್ಲಾ ಕೇಳಬೇಡಿ ಎಂದು ಹೇಳಿದರು.

ರಾಜ್ಯ ಸರಕಾರ ಬುಧವಾರ ದೆಹಲಿಯಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ ಕೇಂದ್ರದ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಮಾಡಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಭೋಜನ ಮಾಡಿದ್ದರು. ಮಾಂಸದ ಊಟ ಮಾಡಿ ಬಳಿಕ ನೇರವಾಗಿ ಮೈಸೂರಿಗೆ ಬಂದಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಭಾಗವಹಿಸಿದ್ದು, ಹೀಗೆ ಮಾಂಸದೂಟ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

Leave A Reply