Shringeri: ಸಾಲ ಹಿಂದಿರುಗಿಸುವಂತೆ ಧರ್ಮಸ್ಥಳ ಸಂಘದವರಿಂದ ಹಲ್ಲೆ ಆರೋಪ- ನೇಣುಬಿಗಿದು 29ರ ಮಹಿಳೆ ಆತ್ಮಹತ್ಯೆ!!

Share the Article

Shringeri: ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆಂದು 29ರ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ(Shringeri) ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಟಿಕೆಟ್ ನನಗೆ ಸಿಗಲಿದೆ : ಸಂಸದೆ ಸುಮಲತಾ ಅಂಬರಿಶ್

ಹೌದು, ವೈಯಕ್ತಿಕ ಅವಶ್ಯಕತೆಗಳಿಗಾಗಿ ಕೆಲ ತಿಂಗಳ ಅರ್ಪಿತಾ ಎಂಬಾಕೆ ಧರ್ಮಸ್ಥಳ ಸಂಘ(Dharmasthala sanga)ದಲ್ಲಿ 1 ಲಕ್ಷ ಸಾಲವನ್ನು ಪಡೆದಿದ್ದರು. ಆದರೆ ಸರಿಯಾದ ಸಮಯಕ್ಕೆ ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ.

ಅಂದಹಾಗೆ ಧರ್ಮಸ್ಥಳ ಸಂಘದವರು ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಲ್ಲೆ ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ ಮಗುವಿನೊಂದಿಗೆ ಒಬ್ಬರೇ ಇದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply