Home Karnataka State Politics Updates Parliment election: ಬಿಜೆಪಿಯಿಂದ ಪ್ರಧಾನಿ ಮೋದಿ ಸೇರಿ ನೂರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!!

Parliment election: ಬಿಜೆಪಿಯಿಂದ ಪ್ರಧಾನಿ ಮೋದಿ ಸೇರಿ ನೂರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!!

Hindu neighbor gifts plot of land

Hindu neighbour gifts land to Muslim journalist

 

Parliment election ಪ್ರಯುಕ್ತ ಎಲ್ಲಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಸೂಕ್ತವಾದ, ಗೆಲ್ಲುವಂತಹ ಅಭ್ಯರ್ಥಿಗಳನ್ನೇ ಹುಡುಕುತ್ತಿವೆ. ಈ ಬೆನ್ನಲ್ಲೇ ಬಿಜೆಪಿಯ ಮೊದಲ ಹಂತದ 100 ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಹೌದು, ಚುನಾವಣಾ ಆಯೋಗವು(Election commission)ಮಾರ್ಚ್ ನಂತರ ಚುನಾವಣೆಯ ನಿಗದಿತ ದಿನಾಂಕ ಘೋಷಣೆ ಮಾಡುವುದಾಗಿ ತಿಳಿಸಿರುವುದರಿಂದ ಚುನಾವಣೆ ಎದುರಿಸಲು ಭಾರತೀಯ ಜನತಾ ಪಕ್ಷವು ಎಲ್ಲಾ ರೀತಿಯಿಂದಲೂ ಸಿದ್ಧತೆ ನಡೆಸಿದೆ. ಅಲ್ಲದೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಫೆಬ್ರವರಿ 29 ರಂದು ನಡೆಯುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಈ ಸಭೆಯ ನಂತರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(PM Modi), ಗೃಹ ಸಚಿವ ಅಮಿತ್ ಶಾ ಸೇರಿದಂತೆ ಸುಮಾರು 80 ರಿಂದ 100 ಅಭ್ಯರ್ಥಿಗಳ ಹೆಸರುಗಳಿವೆ. ಅದರಲ್ಲಿ ಇನ್ನೂ ಕೆಲವು ದೊಡ್ಡ ಮುಖಗಳು ಇರಬಹುದು ಎಂದು ಅಂದಾಜಿಸಲಾಗಿದೆ.