Patanjali: ಪತಂಜಲಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್: ಪತಂಜಲಿಯ ಸುಳ್ಳು ಜಾಹೀರಾತುಗಳ ಮೇಲೆ ತಾತ್ಕಾಲಿಕ ನಿಷೇಧ
Patanjali: ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಆಯುರ್ವೇದದ ದಾರಿತಪ್ಪಿಸುವ ಜಾಹೀರಾತಿಗೆ ಸಂಬಂಧಿಸಿದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ನಲ್ಲಿ ಮತ್ತೆ ವಿಚಾರಣೆ ನಡೆಸಿತು.
ನವೆಂಬರ್ ನಲ್ಲಿ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ, ನ್ಯಾಯಮೂರ್ತಿ ಅಮಾನುಲ್ಲಾ ಕೋಪಗೊಂಡು “ನ್ಯಾಯಾಲಯದ ಆದೇಶದ ಹೊರತಾಗಿಯೂ ದಾರಿತಪ್ಪಿಸುವ ಜಾಹೀರಾತನ್ನು ಪ್ರಕಟಿಸಲು ನಿಮಗೆ ಹೇಗೆ ಧೈರ್ಯವಾಯಿತು” ಎಂದು ಪತಂಜಲಿ ಆಯುರ್ವೇದವನ್ನು ಪ್ರತಿನಿಧಿಸುವ ವಕೀಲರನ್ನು ಪ್ರಶ್ನಿಸಿದ್ದಾರೆ.
ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಲ್ಲಿ ನಿರ್ದಿಷ್ಟಪಡಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಉದ್ದೇಶಿಸಿರುವ ಜಾಹೀರಾತು ಅಥವಾ ಔಷಧೀಯ ಉತ್ಪನ್ನಗಳ ಮಾರುಕಟ್ಟೆಯಿಂದ ಪತಂಜಲಿಯನ್ನು ನಿಷೇಧಿಸಲಾಗಿದೆ.
ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಭಾಗಿಯ ಪೀಠವು “ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಇದು ಬಹಳ ದುರದೃಷ್ಟಕರ ಸಂಗತಿ. ಸರ್ಕಾರವು ಕೆಲವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ “ಎಂದು ಸುಪ್ರೀಂ ಕೋರ್ಟ್ ಹೇಳಿದೆ.
w29n1q