Citizenship Law CAA: 4 ವರ್ಷಗಳ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಮೋದಿ ಸರಕಾರ

Share the Article

Citizenship Law CAA: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರದ ನರೇಂದ್ರ ಮೋದಿ ಸರಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಇಂದು ಜಾರಿ ಮಾಡಿದೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಪಾರ್ಸಿ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಪೌರತ್ವ ನೀಡುವ ಕಾಯಿದೆ ಇದಾಗಿದ್ದು., ಅವರ ದೇಶದಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಕಾರಣ 2014ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ್ದ ಮೇಲಿನ ಧರ್ಮದವರಿಗೆ ಭಾರತೀಯ ಪೌರತ್ವಕ್ಕೆ ತ್ವರಿತವಾಗಿ ಒದಗಿಸುವ ಸಿಎಎ 1955ರ ಪೌರತ್ವ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ.

ಸಂಸತ್ತಿನಲ್ಲಿ ಅಂಗೀಕಾರವಾಗಿ ನಾಲ್ಕು ವರ್ಷಗಳ ನಂತರವೂ, ಸಿಎಎ ನಿಯಮಗಳು ಮತ್ತು ಪ್ರಕ್ರಿಯೆ ಜಾರಿಗೆ ಬಂದಿರಲಿಲ್ಲ. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ನಂತರ ಕೇಂದ್ರ ಜಾರಿಗೆ ತಂದಿದೆ.

 

Leave A Reply