Pratap simha: ಬಿಜೆಪಿ ಟಿಕೆಟ್ ಕೊಡುತ್ತೆ ಅನ್ನೋ ಸುದ್ದಿ ಬೆನ್ನಲ್ಲೇ ಯದುವೀರ್ ಒಡೆಯರ್ ಗೆ ಬಿಗ್ ಶಾಕ್ ಕೊಟ್ಟ ಪ್ರತಾಪ್ ಸಿಂಹ !!
Pratap simha: ಮೈಸೂರು-ಕೊಡಗು (Mysore-Kodagu) ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಸಲ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು ಮೈಸೂರು ಒಡೆಯ ಯದುವೀರ್ ಅವರಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ವಿಚಲಿತರಾಗಿರೋ ಪ್ರತಾಪ್ ಸಿಂಹ ಅವರು ಮೈಸೂರಿನ ಯದುವೀರ್ ಒಡೆಯರಿಗೆ ಶಾಕ್ ನೀಡಿದ್ದಾರೆ.
ಯದುವೀರ್ (Yaduveer Wadiyar ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳುವ ಮೂಲಕ ಕೆಲವೊಂದು ವಿಚಾರಗಳನ್ನು ಪ್ರಸ್ತಾಪಿಸಿ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಪ್ರಯತ್ನ ಮಾಡಿದ್ದಾರೆ.
ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆಯ ಸಾವಿರಾರು ಎಕರೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ಇದೆ. ಹೀಗಾದರೆ ಖಂಡಿತ ನನ್ನ ಬೆಂಬಲವಿದೆ ಎಂದರು.
ಇಷ್ಟೇ ಅಲ್ಲದೆ ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ಕಾಲೆಳೆದರು.