Deadly Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಅಂತ್ಯ, ಪವಾಡಸದೃಶವಾಗಿ ಬದುಕುಳಿದ ಮಗು

Share the Article

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.

ಇದನ್ನೂ ಓದಿ: H.D.Kumara Swamy: “ಆತ ಡಾ.ಮಂಜುನಾಥ್ ಅಂಗುಷ್ಟಕ್ಕೂ ಸಮನಲ್ಲ” ಎಂದು ಡಿ.ಕೆ.ಸುರೇಶ್ ವಿರುದ್ಧ ಕಿಡಿಕಾರಿದ ಹೆಚ್‌ಡಿಕೆ

ಮೃತಪಟ್ಟವರಲ್ಲಿ ಆರೋಗ್ಯ ಇಲಾಖೆಯ ಉದ್ಯೋಗಿ, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಅಪಘಾತ ಸಂಭವಿಸಿದಾಗ ಅದೃಷ್ಟವಶಾತ್‌ ಮಗುವೊಂದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದೆ ಎಂದು ವರದಿಯಾಗಿದೆ. ಮಗುವನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಸಾಗಿಸಲಾಗಿದೆ.

Leave A Reply