Sadananda Gowda: ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನ- ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ !!

Share the Article

Sadananda Gowda: ಲೋಕಸಭಾ ಚುನಾವಣೆಗೆ(Parliament election) ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು, ಸದಾನಂದಗೌಡರಿಗೆ(Sadananda Gowda) ಲೋಕಸಭಾ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಅವರು ಹಾಕಿದ ಪೋಸ್ಟ್ ಬಾರೀ ಕುತೂಹಲ ಮೂಡಿಸಿದೆ. ಅದರಲ್ಲಿ ’10 ವರ್ಷ ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಸೇವೆ ಮಾಡಿದ್ದೇನೆ. ನಿಮ್ಮ ಕೆಲಸ ಮಾಡುವ ಅವಕಾಶ ಕೊಟ್ಟು ಆಶೀರ್ವದಿಸಿದ್ದೀರಿ. ಶಕ್ತಿಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದೇನೆ. ನಾನು ನಿಮ್ಮೆಲ್ಲರಿಗೂ ಚಿರಋಣಿ’ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್ ನಲ್ಲಿ ಇನ್ಮುಂದೆಯೂ ನಿಮ್ಮ ಜತೆಗೆ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಬರೆದುಕೊಂಡಿರುವುದೇ ಅಚ್ಚರಿಕೆ ಕಾರಣವಾಗಿದೆ. ಡಿಕೆ ಶಿವಕುಮಾರ್(DK Shivkumar) ಸುಳಿವು ನೀಡಿದಂತೆ ಸದಾನಂದಗೌಡ ಅವರು ಕಾಂಗ್ರೆಸ್​​ನಿಂದ ಸ್ಪರ್ಧೆ ಮಾಡುತ್ತಾರಾ ಎನ್ನುವ ಚರ್ಚೆಗಳು ಶುರುವಾಗಿವೆ. ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಈ ಹಿಂದೆಯೂ ಹಲವು ಬಾರಿ ಊಹಾಪೋಹಗಳು ಹರಿದಾಡಿದ್ದವು. ಇದೀಗ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಇದೀಗ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ.

Leave A Reply