Arvind Kejriwal: ಅಬಕಾರಿ ನೀತಿ ಹಗರಣ : ಜಾರಿ ನಿರ್ದೇಶನಾಲಯದಿಂದ ಅರವಿಂದ್ ಕೇಜ್ರಿವಾಲ್ ಬಂಧನ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ರನ್ನು ಬಂಧಿಸಿದೆ. ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಕೆಲವೇ ಗಂಟೆಗಳ ಅಂತರದಲ್ಲಿ ಕೇಜ್ರಿವಾಲ್ ಬಂಧನವಾಗಿದೆ.
ಇದನ್ನೂ ಓದಿ: Terrible Accident: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಮೂರು ಜನ ದಾರುಣ ಸಾವು
ಹೈಕೋರ್ಟ್ ರಕ್ಷಣೆ ಒದಗಿಸಲು ನಿರಾಕರಿಸಿದ ಎರಡು ಗಂಟೆಗಳ ಬಳಿಕ ಗುರುವಾರ ಸಂಜೆ ಅರವಿಂದ್ ಕೇಜ್ರೀವಾಲ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯದ (ಇಡಿ) ತಂಡವೊಂದು ಅವರ ನಿವಾಸಕ್ಕೆ ತೆರಳಿದ್ದು, ನಿವಾಸದಿಂದ 4-5 ಫೋನ್ಗಳು ಮತ್ತು ಎರಡು ಟ್ಯಾಬ್ಲೆಟ್ಗಳನ್ನು ಇಡಿ ವಶಪಡಿಸಿಕೊಂಡಿದೆ.
ಇದನ್ನೂ ಓದಿ: Political News: ”ವಿಕಸಿತ ಭಾರತ” ಸಂದೇಶ ಕಳುಹಿಸುವುದನ್ನು ನಿಲ್ಲಿಸಿ : ಕೇಂದ್ರಕ್ಕೆ ಚುನಾವಣಾ ಆಯೋಗದ ಖಡಕ್ ಸೂಚನೆ
ಬಳಿಕ ನಿವಾಸದ ಆವರಣದಲ್ಲಿ ಶೋಧ ನಡೆಸಿದ ಅಧಿಕಾರಿಗಳು , ನಂತರ ಅವರನ್ನು ಬಂಧಿಸಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ಕರೆದೊಯ್ದಿದ್ದಾರೆ.
ಈ ಹಿಂದೆ ದೆಹಲಿ ಜಲ ಮಂಡಳಿ ಮತ್ತು ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಗಳು ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೇಜ್ರಿವಾಲ್ ಅವರಿಗೆ ಏಜೆನ್ಸಿಯು ಒಂಬತ್ತು ಸಮನ್ಸ್ಗಳನ್ನು ನೀಡಿತ್ತು. ಆದರೆ ಕೇಜ್ರಿವಾಲ್ ಅವರು ಯಾವುದೇ ಸಮನ್ಸ್ ಗಳಿಗೆ ಸ್ಪಂದಿಸದಿರುವ ಕಾರಣ ಇದೀಗ ಅಂತಿಮವಾಗಿ ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಿದೆ.