Home Crime Praveen Nettaru Murder Case: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಒಂದೇ ಜೈಲಿನಲ್ಲಿ...

Praveen Nettaru Murder Case: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಒಂದೇ ಜೈಲಿನಲ್ಲಿ ಇರಿಸುವಂತೆ ಕೋರಿ ಆರೋಪಿಗಳ ಅರ್ಜಿ; ವಜಾಗೊಳಿಸಿದ ಹೈಕೋರ್ಟ್‌

Praveen Nettaru Murder Case

Hindu neighbor gifts plot of land

Hindu neighbour gifts land to Muslim journalist

Praveen Nettaru Murder Case: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು “ತಮಗೆ ಜೀವ ಭಯ ಇದೆ ಹಾಗೂ ತಮ್ಮ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರ ಮಾಡಬೇಕು” ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇದನ್ನೂ ಓದಿ: Sonu Gowda: 8 ವರ್ಷದ ಬಾಲಕಿಯ ದತ್ತು ವಿಚಾರ; ಸೋನು ಗೌಡ ಬಂಧನ

ಅಬ್ದುಲ್‌ ಬಶೀರ್‌ ಸಹಿತ ರಾಜ್ಯದ ವಿವಿಧ ಜೈಲುಗಳಲ್ಲಿರುವ 10 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: Mangaluru Rain: ದಕ್ಷಿಣ ಕನ್ನಡದ ಹಲವು ಕಡೆ ಮಳೆಯ ಸಿಂಚನ; ಕಾದು ಕೆಂಡದಂತಿದ್ದ ಇಳೆಗೆ ವರುಣನ ಕೃಪೆ

ಈ ಪ್ರಕರಣದಲ್ಲಿ ಬಂಧನದಲ್ಲಿರುವ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯವರು. ಅವರು ಈಗಾಗಲೇ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನೆಲ್ಲ ಒಂದೇ ಕಡೆ ಇಡುವುದು ಸೂಕ್ತ ಅಲ್ಲ. ಹಾಗಾಗಿ ಸ್ಥಳಾಂತರ ಅನಗತ್ಯ. ಹಾಗಾಗಿ ಅರ್ಜಿ ವಜಾಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಅರ್ಜಿದಾರರ ಪರ ವಕೀಲರು ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಜೀವಕ್ಕೆ ಅಪಾಯವಿದ್ದು, ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಬೇಕು. ಹಾಗೂ ಅಲ್ಲಿ ವಿವಿಧ ಕೊಠಡಿಗಳಲ್ಲಿ ಇರಿಸಬೇಕು. ಅಲ್ಲದೇ ಅವರ ಪರ ವಕೀಲರು ಅಗತ್ಯವಿದ್ದಲ್ಲಿ ಭೇಟಿಗೆ ಅವಕಾಶ ನೀಡಬೇಕು. ಜೈಲುಗಳಲ್ಲಿ ವೀಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ ಸರಿ ಇಲ್ಲದ ಕಾರಣ ಅವರ ಪರ ವಕೀಲರು ಚರ್ಚೆ ನಡೆಸುವುದಕ್ಕೆ ಸಾಧ್ಯವಿಲ್ಲ ಎಂದು ಕೋರಿದ್ದರು.

ಇದೇ ವೇಳೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳೊಂದಿಗೆ ವಕೀಲರು ಸಂಭಾಷಣೆ ನಡೆಸಲು ವೀಡಿಯೋ ಕಾನ್ಫರೆನ್ಸಿಂಗ್‌ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಸರಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. ವಕೀಲರು ಹಾಗೂ ಕುಟುಂಬದ ಸದಸ್ಯರೊಂದಿಗೆ ನಡೆಸುವ ಸಂಭಾಷಣೆ ಮತ್ತೊಬ್ಬರಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಲು ಹೆಡ್‌ಫೋನ್‌ಗಳನ್ನು ಒದಗಿಸಬೇಕು. ಸರಕಾರ ಈ ಸೌಲಭ್ಯವನ್ನು ದೋಷವಿಲ್ಲದಂತೆ ಕಾರ್ಯನಿರ್ವಹಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.