Priyank Kharge: ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್; ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

Share the Article

Priyank Kharge: ಪ್ರಿಯಾಂಕ್‌ ಖರ್ಗೆ ಅವರು ಬಿಜೆಪಿ ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ (Election) ಗೆಲ್ಲುವ ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಹಾಗೂ ನನಗೆ ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಅದರಲ್ಲಿ ತನ್ನನ್ನು ಎನ್‌ಕೌಂಟರ್‌ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Dingaleshwara Shri: ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಿದ್ದೇ ಪ್ರಹ್ಲಾದ್ ಜೋಶಿ – ದಿಂಗಾಲೇಶ್ವರ ಶ್ರೀಗಳಿಂದ ಸ್ಪೋಟಕ ಮಾಹಿತಿ

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿಯವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಗಲಭೆ ಮಾಡಬೇಕು, ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕೆಂಬ ಪ್ಲ್ಯಾನ್‌ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ. ನನ್ನ ಎನ್‌ಕೌಂಟರ್‌ ಮಾಡಲಾಗುವುದು ಎಂದು ಬೆದರಿಕೆ ಪತ್ರವೊಂದು ಫಿನ್‌ಲ್ಯಾಂಡ್‌ನಿಂದ ಬಂದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: Actor Siddharth: ಖ್ಯಾತ ನಟ ಸಿದ್ಧಾರ್ಥ್‌ ಮೊದಲ ಪತ್ನಿ ಯಾರು?

Leave A Reply