Patanjali Misleading Advertising Case: ಪತಂಜಲಿ ಸುಳ್ಳು ಜಾಹೀರಾತು ಪ್ರಕರಣ; ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್ ಕ್ಷಮೆಯಾಚಿಸಿದ ಬಾಬಾ ರಾಮ್‌ದೇವ್
Patanjali Misleading Advertising Case: ಪತಂಜಲಿಯ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಕಟಿಸಿದ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಘವು ಪತಂಜಲಿ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಕಟಿಸಿರುವ ಕುರಿತು ಅರ್ಜಿ ಸಲ್ಲಿಸಿದ್ದು, ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ, 1954 ರ ಉಲ್ಲಂಘನೆಗಾಗಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ಕೋವಿಡ್ -19 ರ ಅಲೋಪತಿ ಚಿಕಿತ್ಸೆಯ ವಿರುದ್ಧ ವಿವಾದಾತ್ಮಕ ಕಾಮೆಂಟ್‌ಗಳಿಗಾಗಿ ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮ್‌ದೇವ್ ವಿರುದ್ಧ ಹಲವಾರು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: K S Eshwarappa: ಈಶ್ವರಪ್ಪರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಮೋದಿ, ಶಾ ?!
ಸುಪ್ರೀಂ ಕೋರ್ಟ್ ಹೇಳಿದ್ದೇನು?
ನ್ಯಾಯಾಲಯದಲ್ಲಿ ನೀಡಿದ ಭರವಸೆಯನ್ನು ನೀವು ಪಾಲಿಸಬೇಕು, ನೀವು ಎಲ್ಲ ಮಿತಿಗಳನ್ನು ಮುರಿದಿದ್ದೀರಿ ಎಂದು ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ.
ಇತ್ತೀಚೆಗಷ್ಟೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿತ್ತು. ಆಯುರ್ವೇದಿಕ್ ಕಂಪನಿ ಪತಂಜಲಿಯು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ ನೀಡಿದ ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ನೇತೃತ್ವದ ಪೀಠ ಹೇಳಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿದ್ದಕ್ಕಾಗಿ ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ವಿರುದ್ಧ ಪೀಠವು ಫೆಬ್ರವರಿ 27 ರಂದು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಆರಂಭಿಸಿತ್ತು.
ಸುಪ್ರೀಂ ಕೋರ್ಟ್ ನಲ್ಲಿ ಪತಂಜಲಿ ಹೇಳಿದ್ದೇನು?
ಪತಂಜಲಿ ತನ್ನ ಉತ್ಪನ್ನಗಳ ಔಷಧೀಯ ಪರಿಣಾಮಕಾರಿತ್ವವನ್ನು ಪ್ರತಿಪಾದಿಸುವ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ ಅಥವಾ ಕಾನೂನನ್ನು ಉಲ್ಲಂಘಿಸಿ ಅವುಗಳನ್ನು ಜಾಹೀರಾತು ಅಥವಾ ಬ್ರ್ಯಾಂಡ್ ಮಾಡುವುದಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತ್ತು. ಯಾವುದೇ ರೀತಿಯ ಮಾಧ್ಯಮದಲ್ಲಿ ಯಾವುದೇ ಔಷಧ ವ್ಯವಸ್ಥೆಯ ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದೆ.