Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ತೀರ್ಥಹಳ್ಳಿಯ ಬಿಜೆಪಿ ಮುಖಂಡ ಎನ್ಐಎ ವಶಕ್ಕೆ
Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ಐಎ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Yoga Class: ಜಪಾನ್ ವಿಧ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಉಜಿರೆಯ ಕಾಲೇಜು!
ಕಳೆದ 10 ದಿನದ ಹಿಂದೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಹಲವು ಅಂಗಡಿಗಳ ಮೇಲೆ, ಮನೆಗಳ ಮೇಲೆ ದಾಳಿ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ಐಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ.
ಇದನ್ನೂ ಓದಿ: Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಮಾ.1 ರಂದು ಬೆಂಗಳೂರಿನ ವೈಟ್ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವೊಂದು ಸಂಭವಿಸಿದ್ದು, ಈ ಘಟನೆಯಲ್ಲಿ ಅಲ್ಲಿದ್ದ ಒಂಭತ್ತು ಜನರು ಗಾಯಗೊಂಡಿದ್ದರು. ಇದರ ತನಿಖೆ ನಡೆಯುತ್ತಿದ್ದು, ಇದೀಗ ಬಿಜೆಪಿ ಮುಖಂಡನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದು ಹೊಸ ಬೆಳವಣಿಗೆಯಾಗಿದೆ.