Love Jihad: ಲವ್ ಜಿಹಾದ್ ಆರೋಪ; ಮುಸ್ಲಿಂ ವಿದ್ಯಾರ್ಥಿಗೆ ಥಳಿಸಿದ ಯುವಕರು
Love Jihad: ಮಹಾರಾಷ್ಟ್ರದ ಪುಣೆ ನಗರದ ವಿಶ್ವವಿದ್ಯಾನಿಲಯವೊಂದರ 19 ವರ್ಷದ ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ‘ಲವ್ ಜಿಹಾದ್’ನಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಆರೋಪಿಸಿ ಐವರು ಅಪರಿಚಿತ ವ್ಯಕ್ತಿಗಳು ಥಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಇಬ್ಬರು ವಿದ್ಯಾರ್ಥಿನಿಯರೊಂದಿಗೆ ಯುವಕ ಭಾನುವಾರ ಮಧ್ಯಾಹ್ನ ಮಾತನಾಡುತ್ತಿರುವ ವೇಳೆ ಈ ಘಟನೆ ನಡೆದಿದೆ ಎಂದು ಚತುಶ್ರಿಂಗಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಪುರುಷ ವಿದ್ಯಾರ್ಥಿ, ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಊಟ ಮಾಡಿ ಹಿಂತಿರುಗುತ್ತಿದ್ದಾಗ ಐದು ಅಪರಿಚಿತ ವ್ಯಕ್ತಿಗಳು ಮೋಟರ್ ಬೈಕ್‌ಗಳಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್ಸಿಗೆ ನುಗ್ಗಿ ಮುಸ್ಲಿಂ ಯುವಕನನ್ನು ಹಿಗ್ಗಾಮುಗ್ಗಾ ತಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅವರು ವಿದ್ಯಾರ್ಥಿಯನ್ನು ಪ್ರಶ್ನಿಸಲು ಪ್ರಾರಂಭಿಸಿದರು ಮತ್ತು ಅವರ ಆಧಾರ್ ಕಾರ್ಡ್ ತೋರಿಸಲು ಕೇಳಿದ್ದಾರೆ. ಗುರುತಿನ ಚೀಟಿಯಲ್ಲಿ ತನ್ನ ಹೆಸರನ್ನು ನೋಡಿದ ನಂತರ ಅವರಲ್ಲಿ ಒಬ್ಬ, ಲವ್ ಜಿಹಾದ್ ಮಾಡಲು ವಿಶ್ವವಿದ್ಯಾನಿಲಯಕ್ಕೆ ಬಂದಿದ್ದೀಯಾ ಎಂದು ಪ್ರಶ್ನಿಸಿ ತನ್ನ ಮೇಲೆ ಮತ್ತು ಅಲ್ಲಿದ್ದ ಹಿಂದೂ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ತನ್ನ ದೂರಿನಲ್ಲಿ ಆರೋಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದೇವೆ ಮತ್ತು ಸಿಸಿಟಿವಿ ದೃಶ್ಯಗಳ ಸಹಾಯದಿಂದ ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.