2nd Puc Result 2024: ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ತೃತೀಯ ಸ್ಥಾನಕ್ಕೆ ಏರಿದ ವಿಜಯಪುರ !
2nd Puc Result 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಏ.10) ಪ್ರಕಟ ಮಾಡಿದೆ. ಈ ಬಾರಿ ಕೂಡಾ ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಉಡುಪಿ ಸ್ಥಾನ ಪಡೆದುಕೊಂಡಿದೆ.
ಇದನ್ನೂ ಓದಿ: Pigmentation: ಪಿಗ್ಮೆಂಟೇಷನ್ ಸಮಸ್ಯೆಯಿಂದ ಬಳಲುತ್ತಿದ್ದೀರ ? : ಇದನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ತಪ್ಪದೇ ಬಳಸಿ
ದಕ್ಷಿಣ ಕನ್ನಡ ಮುಂಚೂಣಿಯಲ್ಲಿ ನಿಂತಿದ್ದು ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡದಲ್ಲಿ 97.37 ಪರ್ಸೆಂಟ್ ದಾಖಲೆಯ ಫಲಿತಾಂಶ ಬಂದಿದೆ. ಇನ್ನು ಕರಾವಳಿಯ ಉಡುಪಿ ಜಿಲ್ಲೆಯಲ್ಲಿ 96.80 ಪ್ರತಿಶತ ವಿದ್ಯಾರ್ಥಿಗಳು ಪಾಸಾಗಿದ್ದು, ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಆಶ್ಚರ್ಯ ವಿಷಯ ಏನೆಂದರೆ ವಿಜಯಪುರ ಜಿಲ್ಲೆಯ ತೃತೀಯ ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡಕ್ಕೆ ನಾಲ್ಕನೇ ಸ್ಥಾನ ಬಂದಿದೆ. ಕೊಡಗು ಜಿಲ್ಲೆ ಐದನೇ ಸ್ಥಾನ ಪಡೆದುಕೊಂಡಿದೆ. ಹಾಗೂ ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಇದನ್ನೂ ಓದಿ: Parliment Election : ದಕ್ಷಿಣ ಕನ್ನಡ ಲೋಕಸಭಾ: ನಾಮಪತ್ರ ಹಿಂಪಡೆದ ಅಭ್ಯರ್ಥಿ !!
ಯಥಾಪ್ರಕಾರ ಈ ಬಾರಿ ಕೂಡ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಯಥಾಪ್ರಕಾರ ಈ ಬಾರಿ ಕೂಡ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ವಿದ್ಯಾಲಕ್ಷ್ಮೀ 598 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ವಿದ್ಯಾಲಕ್ಷ್ಮಿ ಹೆಚ್ಚಿನ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾಳೆ.
ರ್ಯಾಂಕುಗಳಲ್ಲಿ ಕೂಡ ಬಾಲಕಿಯರೇ ಮೇಲುಗೈ
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ ಪ್ರಥಮ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಮೇಧಾ ಡಿ ಪಾಟ್ಕರ್ ಪ್ರಥಮ ಸ್ಥಾನ ಗಳಿಸಿದ್ದಾಳೆ. ಮೇಧಾ 600ಕ್ಕೆ 596 ಗರಿಷ್ಠ ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಂತೆಯೇ ಅಧಿಕ ಅಂಕ ಗಳಿಸಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಕೂಡ ಬಾಲಕಿಯರದೇ ಮೇಲುಗೈ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಒಟ್ಟು 597 ಅಂಕಗಳಿಸಿ ಆಕೆ ಟಾಪರ್ ಅನ್ನಿಸಿಕೊಂಡಿದ್ದಾಳೆ.
ಮಂಗಳೂರಿನ ಕೆನರ ಕಾಲೇಜು ವಿದ್ಯಾರ್ಥಿನಿ ತುಳಸಿ ಪೈ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, 596 ಮಾರ್ಕು ಪಡೆದುಕೊಂಡಿದ್ದಾರೆ.
ಪ್ರಸಕ್ತ ವರ್ಷದಲ್ಲಿ ಕೊಪ್ಪಳ 80% ಧಾರವಾಡ 80 ಪರ್ಸೆಂಟ್, ಮಂಡ್ಯ 80 ಪರ್ಸೆಂಟ್, ಹಾವೇರಿ 78% ಯಾದಗಿರಿ 77 ಪರ್ಸೆಂಟ್, ಬೆಳಗಾವಿ 77%, ಬಳ್ಳಾರಿ 74%, ಕಲಬುರ್ಗಿ 75%, ಬೆಳಗಾವಿ 77%, ಗದಗ 72 ಪರ್ಸೆಂಟ್, ಚಿತ್ರದುರ್ಗ 72% ರಾಯಚೂರು 73%, ರಾಯಚೂರು 73% ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಸರ್ಕಾರಿ ಶಾಲೆಗಳು ಕೂಡ ಮುಂಚೂಣಿಯಲ್ಲಿ
91 ಸರ್ಕಾರಿ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದ್ದು ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕೂಡ ಬೀಗುವಂತೆ ಮಾಡಿವೆ ಈ 91 ಸರ್ಕಾರಿ ಶಾಲೆಗಳು. ಅಚ್ಚರಿಯ ವಿಷಯವೆಂದರೆ 34 ಶಾಲೆಗಳಲ್ಲಿ ಝೀರೋ ಫಲಿತಾಂಶ ಬಂದಿದೆ.
ಇಂದು (ಬುಧವಾರ) 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ನಂತರ 11 ಗಂಟೆಗೆ ವೆಬ್‌ಸೈಟ್‌ನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟ ಮಾಡಲಾಗಿದೆ. ವಿದ್ಯಾರ್ಥಿಗಳು karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಲು ಸಾಧ್ಯ.
ಈ ವರ್ಷ 2024ರ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ನಡೆದಿದ್ದ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗಗಳಿಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ರಾಜ್ಯದಾದ್ಯಂತ 6,81,079 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 1,124 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಒಟ್ಟು 5,52, 690 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಇಲಾಖೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ.
5,52,690 ವಿದ್ಯಾರ್ಥಿಗಳು ಪಾಸಾಗಿದ್ದು ಒಟ್ಟು 81.15% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಶಿಕ್ಷಣ ಇಲಾಖೆ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಿಮ್ಮ ಮೊಬೈಲಿನಲ್ಲಿಯೇ ಫಲಿತಾಂಶ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಫಲಿತಾಂಶ ಪರಿಶೀಲಿಸುವುದು ಹೇಗೆ ? ಎಲ್ಲಿ?
ವಿದ್ಯಾರ್ಥಿಗಳು ಮೊದಲಿಗೆ karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
ಅಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಂಡು ಕ್ಲಿಕ್ ಮಾಡಬೇಕು.
ಅಲ್ಲಿ ಆವಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.