Suicide: ಸ್ಯಾಂಡಲ್ ವುಡ್ ನಿರ್ಮಾಪಕ “ಸೌಂದರ್ಯ ಜಗದೀಶ್” ಆತ್ಮಹತ್ಯೆ

Share the Article

Suicide: ಸ್ಯಾಂಡಲ್ ವುಡ್ ಖ್ಯಾತ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: Parliment election: ಬಿಜೆಪಿಯ ಪ್ರಣಾಳಿಕೆ ‘ಸಂಕಲ್ಪ ಪತ್ರ ‘ ಬಿಡುಗಡೆ !!

Suicide

ಸೌಂದರ್ಯ ಜಗದೀಶ್ ಅವರು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಅವರು ಇದುವರೆಗೂ ಕನ್ನಡದ ಅನೇಕ ಸಿನಿಮಾಗಳನ್ನ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Skin Care: ಹೊಳೆಯುವ ಚರ್ಮ ನಿಮ್ಮದಾಗಬೇಕೆ ? : ಕ್ರೀಮ್‌ಗಳ ಬದಲಿಗೆ ಒಣದ್ರಾಕ್ಷಿಯಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿ

ಇತ್ತೀಚಿನ ದಿನಗಳಲ್ಲಿ ಸೌಂದರ್ಯ ಜಗದೀಶ್ ಅವರು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ ಹಾಗೆಯೇ ಅವರು ಹಣಕಾಸಿನ ವಿಚಾರವಾಗಿ ಹೆಚ್ಚು ಚಿಂತೆಗೀಡಾಗಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ‌.

ಸೌಂದರ್ಯ ಜಗದೀಶ್ ಅವರು ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಇತರೆ ಉದ್ಯಮಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದರು. ಆದರೆ ಇಂದು ಹಣಕಾಸಿನ ವಿಚಾರವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಸೌಂದರ್ಯ ಜಗದೀಶ್ ಅವರ ಮೃತ ದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Leave A Reply